ನಾಗಮಂಗಲ ತಾಲೂಕಿನ ಬೆಳ್ಳೂರು ಸಮೀಪದ ವೀರವೈಷ್ಣವಿ ನದಿಯಲ್ಲಿ ಎನ್ನಲಾದ ಸ್ಥಳಕ್ಕೆ ತಹಸೀಲ್ದಾರ್ ನಯೀಂ ಉನ್ನಿಸಾ ವಿವಿಧ ಇಲಾಖೆ ಅಧಿಕಾರಿಗಳ ಜತೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.  
ಜಿಲ್ಲೆ

ಬೆಳ್ಳೂರಿನ ವೀರವೈಷ್ಣವಿ ನದಿ ಪಾತ್ರದಲ್ಲಿ ಎಸಿ ಪರಿಶೀಲನೆ

ನಾಗಮಂಗಲ: ತಾಲೂಕಿನ ಬೆಳ್ಳೂರು ಸಮೀಪದ ವೀರವೈಷ್ಣವಿ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿರುವ ದೂರಿನ ಹಿನ್ನೆಲೆಯಲ್ಲಿ ಇತ್ತೀಚೆಗೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.


ಹಲವು ದೂರುಗಳ ಹಿನ್ನೆಲೆಯಲ್ಲಿ ಮರಳುಗಾರಿಕೆಗೆ ಕಡಿವಾಣ ಹಾಕಿ ಕಾನೂನು ಕ್ರಮವಹಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಜಿಲ್ಲಾಡಳಿತಕ್ಕೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಪಾಂಡವಪುರ ಉಪವಿಭಾಗಾಧಿಕಾರಿ ನಂದೀಶ್ ಸ್ಥಳಕ್ಕೆ ಭೇಟಿ ನೀಡಿದರು. ತಹಸೀಲ್ದಾರ್ ನಯೀಂ ಉನ್ನಿಸಾ ಇದ್ದರು.


ವೀರವೈಷ್ಣವಿ ನದಿಯಲ್ಲಿ ಹಲವು ದಿನಗಳಿಂದ ಅಧಿಕಾರಿಗಳ ಕಣ್ತಪ್ಪಿಸಿ ಅಕ್ರಮವಾಗಿ ಮರಳುಗಾರಿಕೆ ಮಾಡುತ್ತಿದ್ದಾರೆ ಎಂದು ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಸಚಿವ ಎನ್.ಚಲುವರಾಯಸ್ವಾಮಿ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಪರಿಶೀಲನೆ ನಡೆಸಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದರು.