ಶಿಮಂತೂರು ಶ್ರೀ ಆದಿ ಜನಾರ್ಧನ ದೇವಸ್ಥಾನದಲ್ಲಿ ಶ್ರೀ ಆದಿಜನಾರ್ದನ ವಿದ್ಯಾನಿಧಿ ವತಿಯಿಂದ ಶೈಕ್ಷಣಿಕ ವಿದ್ಯಾರ್ಥಿವೇತನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು. ಪ್ರಮುಖರಾದ ಡಾ.ಪದ್ಮನಾಭ ವಿ.ಶೆಟ್ಟಿ, ಚಂದ್ರಹಾಸ ಶೆಟ್ಟಿ, ಮನೋಹರ ಶೆಟ್ಟಿ, ರವಿ ಶೆಟ್ಟಿ, ಸುಂದರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. 
ಜಿಲ್ಲೆ

ಪ್ರತಿಭಾನ್ವೇಷಣೆಯ ಕಾರ್ಯ ಅಭಿನಂದನೀಯ : ಡಾ.ಪದ್ಮನಾಭ ವಿ.ಶೆಟ್ಟಿ ಶ್ಲಾಘನೆ

ಸೌಮ್ಯ ಆರ್

ವಿಜಯವಾಣಿ ಸುದ್ದಿಜಾಲ ಮೂಲ್ಕಿ

ಸ್ವಾವಲಂಬಿಯಾಗಲು ವಿದ್ಯಾದಾನ ಶ್ರೇಷ್ಠವಾಗಿದ್ದು, ಶಿಕ್ಷಣಕ್ಕೆ ಸಹಾಯ ಹಸ್ತ ಹಾಗೂ ಪ್ರತಿಭೆಗಳನ್ನು ಗುರುತಿಸಿ ಗೌರವಿಸುವ ಮೂಲಕ ಪ್ರತಿಭಾನ್ವೇಷಣೆ ಕಾರ್ಯ ಅಭಿನಂದನೀಯ ಎಂದು ಮುಂಬೈ ಕ್ರಿಕೆಟ್ ಅಸೋಸಿಯೇಷನ್ ಕಾರ್ಯಾಧ್ಯಕ್ಷ ಡಾ.ಪದ್ಮನಾಭ ವಿ.ಶೆಟ್ಟಿ ಹೇಳಿದರು.

ಶಿಮಂತೂರು ಶ್ರೀ ಆದಿ ಜನಾರ್ದನ ದೇವಸ್ಥಾನದ ಸಭಾಭವನದಲ್ಲಿ ಶಿಮಂತೂರು ಶ್ರೀ ಆದಿಜನಾರ್ದನ ವಿದ್ಯಾನಿಧಿ ವತಿಯಿಂದ ಶೈಕ್ಷಣಿಕ ವಿದ್ಯಾರ್ಥಿವೇತನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕ್ಷೇತ್ರದ ಮಾಜಿ ಆಡಳಿತ ಮೊಕ್ತೇಸರ ಚಂದ್ರಹಾಸ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ದೇವಸ್ಥಾನವು ಧಾರ್ಮಿಕ ಕಾರ್ಯಕ್ಕೆ ಪೂರಕವಾಗಿರುವ ಜತೆಗೆ ಸ್ಥಳಿಯ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ, ನಿರಂತರ ಅನ್ನದಾನ ಹಾಗೂ ಗ್ರಾಮಾಭಿವೃದ್ಧಿಯ ಯೋಜನೆಗಳನ್ನು ಹಮ್ಮಿಕೊಂಡಿದೆ ಎಂದರು.

ಬಪ್ಪನಾಡು ಕ್ಷೇತ್ರದ ಆಡಳಿತ ಮೊಕ್ತೇಸರ ಮನೋಹರ ಶೆಟ್ಟಿ, ಮುಂಬೈ ಉದ್ಯಮಿಗಳಾದ ರವಿ ಶೆಟ್ಟಿ, ಸುಂದರ ಶೆಟ್ಟಿ, ಸತೀಶ್ ಶೆಟ್ಟಿ ಕೆಂಚನಕೆರೆ, ಕ್ಷೇತ್ರದ ಆಡಳಿತಾಧಿಕಾರಿ ಇಂದು ಎಂ., ಶ್ರೀಪತಿ ಭಟ್ ಪರೆಂಕಿಲ, ಮೋಹನ್ ಕೋಟ್ಯಾನ್, ಹರೀಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಮೋಹನ್ ಕೋಟ್ಯಾನ್ ನಿರೂಪಿಸಿದರು.

ಈ ಸಂದರ್ಭ 45ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿವೇತನ ನೀಡಲಾಯಿತು.