ಜಿಲ್ಲೆ

ಬಿಡಿಎನಲ್ಲಿ ಭಾರಿ ಭ್ರಷ್ಟಾಚಾರ?; ಎಸಿಬಿಯ 67 ಮಂದಿಯಿಂದ ಏಕಕಾಲಕ್ಕೆ ದಾಳಿ, ತನಿಖೆ ಇನ್ನೂ ಪ್ರಗತಿಯಲ್ಲಿ...

Webdesk - Ravikanth

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಳಿ ನಡೆದಿದ್ದು, ತನಿಖೆ ಇನ್ನೂ ಪ್ರಗತಿಯಲ್ಲಿದೆ. ಬಿಡಿಎನಲ್ಲಿ ಭಾರಿ ಭ್ರಷ್ಟಾಚಾರ ನಡೆಯುತ್ತಿರುವ ಕುರಿತು ಖಚಿತ ಮಾಹಿತಿ ಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆಸಿರುವುದಾಗಿ ಎಸಿಬಿ ತಿಳಿಸಿದೆ.

ಎಸಿಬಿಯ 5 ಡಿವೈಎಸ್​ಪಿ, 12 ಪೊಲೀಸ್ ಇನ್​ಸ್ಪೆಕ್ಟರ್​ ಹಾಗೂ 50 ಸಿಬ್ಬಂದಿ ಏಕಕಾಲಕ್ಕೆ ಬಿಡಿಎ ಮೇಲೆ ದಾಳಿ ನಡೆಸಿದ್ದು, ವ್ಯಾಪಕ ಪರಿಶೀಲನೆ ನಡೆಯುತ್ತಿದೆ. ತನಿಖೆ ಇನ್ನೂ ಪ್ರಗತಿಯಲ್ಲಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರಬೀಳಬೇಕಿದೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಕಡತ ಹಾಗೂ ದಾಖಲೆಗಳನ್ನು ಪರಿಶೀಲನೆ ಮಾಡಲಾಗುತ್ತಿದ್ದು, ಅಕ್ರಮ ಪತ್ತೆ ಹಚ್ಚಲು ತನಿಖೆ ನಡೆಸಲಾಗುತ್ತಿದ್ದೆ ಎಂದು ಎಸಿಬಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.