ಜಿಲ್ಲೆ

ಮಂಗಳೂರು ಮೆಸ್ಕಾಂ ಎಇಇ ಮನೆಗೆ ಎಸಿಬಿ ದಾಳಿ

reportermng

ಮಂಗಳೂರು: ಇಲ್ಲಿನ ಮೆಸ್ಕಾಂ ಅಧಿಕಾರಿ ಮನೆ ಮತ್ತು ಕಚೇರಿ ಮೇಲೆ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ಬುಧವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ.

ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ದಯಾಸುಂದರ್ ಅವರ ಮಂಗಳೂರಿನ ಮಲ್ಲಿಕಟ್ಟೆ ಬಳಿಯ ಮನೆ ಮತ್ತು ಕುಲಶೇಖರ ಕಚೇರಿ ಮೇಲೆ ದಾಳಿ ನಡೆದಿದೆ. ಎಸಿಬಿ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.

ಆದಾಯಕ್ಕಿಂತ ಅಧಿಕ ಸಂಪತ್ತು ಹೊಂದಿರುವ ಆರೋಪದಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.