ಮಡಿಕೇರಿ:
2023ನೇ ಸಾಲಿನ ರಾಜ್ಯಮಟ್ಟದ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಪಾತ್ರವಾದ ಮಾದಾಪುರ ಗ್ರಾ.ಪಂ. ಪರವಾಗಿ ಪಿಡಿಒ, ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸದಸ್ಯರು ಸೋಮವಾರ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ ಖರ್ಗೆ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಉಮಾಮಹದೇವನ್, ಸರ್ಕಾರದ ಪ್ರಧಾನ ಕಾರ್ಯದರ್ಶಿ ಅಂಜುಮ್ ಪರ್ವೇಜ್ ಹಾಗೂ ಆಯುಕ್ತರದ ಪ್ರಿಯಾಂಕಾ ಮೇರಿ ಪ್ರಾನ್ಸಿಸ್ ಈ ವೇಳೆ ಇದ್ದರು.
ಮಾದಾಪುರ ಗ್ರಾ.ಪಂ. ಪ್ರಥಮ ಬಾರಿಗೆ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಪಾತ್ರವಾಗಿದೆ. ಮಾದಾಪುರ ಗ್ರಾಮ ಪಂಚಾಯತ್ ಪರವಾಗಿ ಪಿಡಿಒ ಸುಮೇಶ್, ಅಧ್ಯಕ್ಷ ಬಿದ್ದಪ್ಪ, ಉಪಾಧ್ಯಕ್ಷ ಸುರೇಶ್ ಹಾಗೂ ಸರ್ವ ಸದಸ್ಯರು ಪ್ರಶಸ್ತಿ ಸ್ವೀಕರಿಸಿದರು.