ಅರಕೇರಾದ ತಹಸಿಲ್ ಕಚೇರಿ ಆವರಣದಲ್ಲಿ ಸಾರ್ವಜನಿಕರು ಲೋಕಾಯುಕ್ತ ಅಧಿಕಾರಿಗಳಿಗೆ ಅಹವಾಲು ಸಲ್ಲಿಸಿದರು. ಲೋಕಾಯುಕ್ತ ಎಸ್ಪಿ ಡಾ.ರಾಮ್ ಅರಸಿದ್ಧಿ, ಡಿವೈಎಸ್ಪಿ ಹಣಮಂತ್ರಾಯ ಇದ್ದರು.  
ಜಿಲ್ಲೆ

ಜನರಿಗೆ ಸಕಾಲಕ್ಕೆ ಸೇವೆ ನೀಡಿ

ಅರಕೇರಾ: ಸರ್ಕಾರಿ ಸೇವೆಗಳಿಗಾಗಿ ಅಧಿಕಾರಿಗಳಿಗೆ ಲಂಚ ನೀಡಬೇಕಿಲ್ಲ. ನಿಗದಿತ ಅವಧಿಯೊಳಗೆ ಸೌಲಭ್ಯಗಳು ಸಿಗದಿದ್ದಾಗ ಲೋಕಾಯುಕ್ತಕ್ಕೆ ದೂರು ಸಲ್ಲಿಸಿ ಎಂದು ಲೋಕಾಯುಕ್ತ ಎಸ್ಪಿ ಡಾ.ರಾಮ್ ಅರಸಿದ್ಧಿ ಸಲಹೆ ನೀಡಿದರು.

ಸರ್ಕಾರಿ ಸೇವೆಗಳಿಗಾಗಿ ಲಂಚ ನೀಡಬೇಡಿ

ಪಟ್ಟಣದ ತಹಸಿಲ್ ಕಚೇರಿ ಆವರಣದಲ್ಲಿ ಲೋಕಾಯುಕ್ತ ಇಲಾಖೆ ಏರ್ಪಡಿಸಿದ್ದ ಸಾರ್ವಜನಿಕರ ಅಹವಾಲುಗಳ ಸ್ವೀಕಾರ ಕಾರ್ಯಕ್ರಮದಲ್ಲಿ ಬುಧವಾರ ಮಾತನಾಡಿದರು.

ಸರ್ಕಾರಿ ಕಚೇರಿಗಳಲ್ಲಿ ಸೇವೆಗಳನ್ನು ಒದಗಿಸಲು ವಿಳಂಬ ಮಾಡುವಂತಿಲ್ಲ. ಕಾರಣ ಇಲ್ಲದೆ ಅರ್ಜಿ ತಿರಸ್ಕರಿಸಿದರೆ ಅಥವಾ ಕಚೇರಿಗೆ ಅಲೆದಾಡಿಸಬಾರದು. ಒಂದು ವೇಳೆ ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಟ್ಟರೆ ಲೋಕಾಯುಕ್ತಕ್ಕೆ ದೂರು ನೀಡಬೇಕು. ಅಧಿಕಾರಿಗಳು ಮತ್ತು ನೌಕರರು ಜನರಿಗೆ ಸಕಾಲಕ್ಕೆ ಸೇವೆಗಳನ್ನು ಒದಗಿಸಬೇಕು ಎಂದರು.

ಸಾರ್ವಜನಿಕರಿಂದ ಅಹವಾಲು ಸ್ವೀಕಾರ

ಸ್ಥಳೀಯ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಕರ್ತವ್ಯ ನಿರ್ವಹಿಸುತ್ತಿಲ್ಲ. ಪಟ್ಟಣದಲ್ಲಿ ಹೆಚ್ಚುವರಿ ಆಧಾರ್ ಸೇವಾ ಕೇಂದ್ರ ತೆರೆಯಲು ಕ್ರಮ ವಹಿಸಬೇಕು. ಹೊಸದಾಗಿ ಪಡಿತರ ಚೀಟಿ ಸಲ್ಲಿಸಿ ವರ್ಷಗತಿಸಿದರೂ ಅನುಮೋದನೆಯಾಗಿಲ್ಲ, ಫಲಾನುಭವಿಗಳ ಪಡಿತರ ಚೀಟಿಯನ್ನು ಅನುಮೋದಿಸುವಂತೆ ಜನರು ಅಧಿಕಾರಿಗಳಿಗೆ ಒತ್ತಾಯಿಸಿದರು. ಪಿಂಚಣಿ ಯೋಜನೆ, ವಸತಿ ಯೋಜನೆ, ಮನೆ ಕಳೆದುಕೊಂಡವರ ಪರಿಹಾರ ಸೇರಿ ವಿವಿಧ ಸಮಸ್ಯೆಗಳ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ 20ಕ್ಕೂ ಅಹವಾಲುಗಳನ್ನು ಲೋಕಾಯುಕ್ತ ಎಸ್ಪಿ ಡಾ.ರಾಮ್ ಅರಸಿದ್ಧಿ, ತಹಸೀಲ್ದಾರ್ ಚನ್ನಮಲ್ಲಪ್ಪ ಘಂಟಿ, ಡಿವೈಎಸ್ಪಿ ಹಣಮಂತ್ರಾಯ ಸ್ವೀಕರಿಸಿದರು.