ಜಿಲ್ಲೆ

ಪ್ರತಿಜ್ಞಾ ವಿಧಿ ಸ್ವೀಕಾರ

ಮಡಿಕೇರಿ: ರಾಷ್ಟ್ರೀಯ ಐಕ್ಯತಾ ಪ್ರತಿಜ್ಞಾ ವಿಧಿಯನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಮಂಗಳವಾರ ಬೋಧಿಸಿದರು.

ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಐಕ್ಯತಾ ಪ್ರಮಾಣ ವಚನ ಬೋಧಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ರಾಷ್ಟ್ರದ ಸ್ವಾತಂತ್ರ್ಯ ಹಾಗೂ ಐಕ್ಯತೆಯನ್ನು ಸಂರಕ್ಷಿಸಲು ಮತ್ತು ಬಲಪಡಿಸಲು ಅರ್ಪಣಾ ಮನೋಭಾವದಿಂದ ಕೆಲಸ ಮಾಡುತ್ತೇನೆ ಎಂದು ಶ್ರದ್ಧಾ ಪೂರ್ವಕವಾಗಿ ಪ್ರಮಾಣ ಮಾಡುತ್ತೇನೆ ಎಂದು ಬೋಧಿಸಿದರು.

ಈ ಸಂದರ್ಭದಲ್ಲಿ ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಇತರರು ಇದ್ದರು.