ಜಿಲ್ಲೆ

ಬಸ್‌ಗೆ ಸಿಲುಕಿ ಬೈಕ್ ಸವಾರ ಸಾವು

ಎ. ಆರ್. ರಘುರಾಮ

ಹನೂರು: ಪಟ್ಟಣದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಪ್ರವೇಶ ದ್ವಾರದ ತಿರುವಿನಲ್ಲಿ ಮಂಗಳವಾರ ಸಾರಿಗೆ ಸಂಸ್ಥೆಯ ಬಸ್‌ಗೆ ಸಿಲುಕಿ ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಪಟ್ಟಣ ಸಮೀಪದ ಚಂಗವಾಡಿ ಗ್ರಾಮದ ರಾಜು ಎಂಬುವರ ಮಗನಾದ ಚಿನ್ನಸ್ವಾಮಿ (33) ಮೃತ ದುರ್ದೈವಿ. ಈತ ನರಸೀಪುರ ತಾಲೂಕಿನ ಬನ್ನೂರಿನಲ್ಲಿ ಗಾರೆ ಕೆಲಸ ವೃತ್ತಿ ಮಾಡುತ್ತಿದ್ದು, ಮಂಗಳವಾರ ಗ್ರಾಮಕ್ಕೆ ತೆರಳಿ ಬೆಳಗ್ಗೆ 9ರ ವೇಳೆಯಲ್ಲಿ ಬೈಕ್‌ನಲ್ಲಿ ಹನೂರಿಗೆ ಆಗಮಿಸಿದ್ದನು. ಈ ವೇಳೆ ಬಸ್ ನಿಲ್ದಾಣದ ಪ್ರವೇಶ ದ್ವಾರದ ತಿರುವಿನಲ್ಲಿ ಸಾರಿಗೆ ಸಂಸ್ಥೆ ನಡುವೆ ಅಪಘಾತ ಸಂಭವಿಸಿದ್ದು, ಬಸ್‌ನ ಮುಂಭಾಗದ ಚಕ್ರಕ್ಕೆ ಸಿಲುಕಿ ಮೃತಪಟ್ಟಿನು. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲಿಸಿದರು. ಮೃತದೇಹವನ್ನು ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನಿಸಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ನೀಡಲಾಯಿತು. ಈ ಸಂಬಂಧ ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತ ವ್ಯಕ್ತಿಯ ಪೋಟೋ ಇದೆ ಸರ್