ಜಿಲ್ಲೆ

ಅಪಘಾತದಲ್ಲಿ ರಿಕ್ಷಾ ಚಾಲಕ ಮೃತ್ಯು

Mangaluru - Nishantha Narayana

ವಿಟ್ಲ: ಕಾರು ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ರಿಕ್ಷಾ ಚಾಲಕ ಮೃತಪಟ್ಟ ಘಟನೆ ವಿಟ್ಲದ ಉಕ್ಕುಡ ದರ್ಬೆ ಎಂಬಲ್ಲಿ ನಡೆದಿದೆ.

ರಿಕ್ಷಾ ಚಾಲಕ ಪೆರುವಾಯಿ ನಿವಾಸಿ ಅಬ್ಬಾಸ್ ಮೃತಪಟ್ಟವರು. ಮೃತದೇಹವನ್ನು ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ಶವಗಾರದಲ್ಲಿ ಇಡಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.