ಜಿಲ್ಲೆ

ಗುಂಡ್ಯ ಸಮೀಪ ಸರಣಿ ಅಪಘಾತ - ಇಪ್ಪತ್ತಕ್ಕೂ ಅಧಿಕ ಮಂದಿಗೆ ಗಾಯ

Mangaluru - Nishantha Narayana

ಪುತ್ತೂರು: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ಅಡ್ಡಹೊಳೆಯಲ್ಲಿ ಖಾಸಗಿ ಬಸ್, ಕೆಎಸ್ಸಾರ್ಟಿಸಿ ಬಸ್‌ ಹಾಗೂ ಕಾರಿನ ನಡುವೆ ಸರಣಿ ಅಪಘಾತ ನಡೆದು ಇಪ್ಪತ್ತಕ್ಕೂ ಅಧಿಕ ಮಂದಿಗೆ ಗಾಯವಾಗಿದೆ.

ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್‌ ಪಲ್ಟಿಯಾಗಿ ಕೆಎಸ್ಸಾರ್ಟಿಸಿ ಬಸ್ ಗೆ ಡಿಕ್ಕಿಯಾಗಿದ್ದು, ಹಿಂದಿನಿಂದ ಬರುತ್ತಿದ್ದ ಕಾರೊಂದು ಕೆಎಸ್ಸಾರ್ಟಿಸಿ ಬಸ್ ಗೆ ಗುದ್ದಿ ಸರಣಿ ಅಪಘಾತಕ್ಕೆ ಕಾರಣವಾಗಿದೆ. ಬೆಂಗಳೂರು ಮೂಲದ ಕಾಲೇಜು ವಿದ್ಯಾರ್ಥಿಗಳು ಕುಂದಾಪುರಕ್ಕೆ ಪ್ರವಾಸ ತೆರಳಿ ಹಿಂತಿರುಗುತ್ತಿದ್ದ ವೇಳೆ ಘಟನೆ ನಡೆದಿದೆ. ಗಾಯಾಳುಗಳಿಗೆ ನೆಲ್ಯಾಡಿ ಮತ್ತು ಕಡಬದ ಖಾಸಗಿ ಆಸ್ಪತ್ರೆಗಳಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆಯುತ್ತಿದ್ದು, ಕೆಲವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ವರ್ಗಾಯಿಸಲಾಗಿದೆ. ಉಪ್ಪಿನಂಗಡಿ ಪೋಲಿಸ್ ಠಾಣೆಯ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಸಂಚಾರ ನಿಯಂತ್ರಣ ಮಾಡಿದ್ದಾರೆ.