ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ 75ರ ಬಿ.ಸಿ.ರೋಡ್‌ನ ಶಾಂತಿಯಂಗಡಿ ಬಳಿ ಮಂಗಳವಾರ ಬೆಳಗ್ಗೆ ಬಂಟ್ವಾಳ ಪುರಸಭೆಯ ಘನತ್ಯಾಜ್ಯ ಸಾಗಾಟದ ಲಾರಿಗೆ ಗೇಲ್ ಗ್ಯಾಸ್ ಕಂಪನಿಯ ಸಿಎನ್‌ಜಿ ಇಂಧನ ಸಾಗಾಟದ ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ತ್ಯಾಜ್ಯ ಸಾಗಾಟದ ಲಾರಿಯನ್ನು ಹೆದ್ದಾರಿ ಬದಿ ನಿಲ್ಲಿಸಲಾಗಿದ್ದು, ಈ ವೇಳೆ ಇಂಧನ ಸಾಗಾಟದ ಲಾರಿ ವೇಗವಾಗಿ ಆಗಮಿಸಿ ಚಾಲಕನ ನಿಯಂತ್ರಣ ಕಳೆದುಕೊಂಡು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇಂಧನ ಸಾಗಾಟದ ಲಾರಿಯ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.