ಜಿಲ್ಲೆ

ರಸ್ತೆ ಅಪಘಾತದಲ್ಲಿ ಓರ್ವ ಸಾವು

ಸುನಿಲ್ ಪೊನ್ನೇಟಿ

ನಾಪೋಕ್ಲು:

ನಾಪೋಕ್ಲು -ಮೂರ್ನಾಡು ರಸ್ತೆಯ ಹೋದವಾಡ ಗ್ರಾಮದ ಬೊಳಿಬಾಣೆ ಎಂಬಲ್ಲಿ ನಡೆದ ಅಪಘಾತದಲ್ಲಿ ದ್ವಿಚಕ್ರ ವಾಹನ ಸಾವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಾಪೋಕ್ಲುವಿನ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಪ್ಪಾಜಿ (ನವೀನ ೧೯)ಮೃತ ವ್ಯಕ್ತಿ. ದ್ವಿಚಕ್ರ ವಾಹನ ಮತ್ತು ಆಲ್ಟೊ ಕಾರಿನ ನಡುವೆ ಅಪಘಾತ ಸಂಭವಿಸಿ ಈ ದುರ್ಘಟನೆ ನಡೆದಿದೆ.

ಮೂರ್ನಾಡು ಕಡೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಮತ್ತು ಮೂರ್ನಾಡು ಕಡೆಯಿಂದ ನಾಪೋಕ್ಲುವಿಗೆ ಬರುತ್ತಿದ್ದ ಆಲ್ಟೊ ಕಾರಿನ ನಡುವೆ ಅಪಘಾತ ನಡೆದಿದೆ. ದ್ವಿಚಕ್ರ ವಾಹನದಲ್ಲಿದ್ದ ಇನ್ನೊಬ್ಬ ಸಹಪ್ರಯಾಣಿಕ ಐ. ಟಿ. ಐ ವಿದ್ಯಾರ್ಥಿ ಸುದೀಪ್‌ಗೆ ಗಂಭೀರ ಗಾಯವಾಗಿದ್ದು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ನಾಫೋಕ್ಲು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಾನೂನಿನ ಕ್ರಮ ತೆಗೆದುಕೊಂಡಿದ್ದಾರೆ.