ವಿಟ್ಲ: ಕುದ್ದುಪದವು - ಪೆರುವಾಯಿ ರಸ್ತೆಯ ಆದಾಳ ಸಮೀಪ ಕಾರು ಹಾಗೂ ದ್ವಿಚಕ್ರ ವಾಹನ ಡಿಕ್ಕಿಯಾಗಿ ಹಿಂಬದಿ ಸವಾರನಿಗೆ ಗಂಭೀರ ಗಾಯವಾಗಿದೆ.
ಪೆರುವಾಯಿ ಕಡೆಯಿಂದ ಆಗಮಿಸುತ್ತಿದ್ದ ದ್ವಿಚಕ್ರ ವಾಹನ ಹಾಗೂ ಕುದ್ದುಪದವು ಭಾಗದಿಂದ ಆಗಮಿಸಿದ ಕಾರು ಡಿಕ್ಕಿಯಾಗಿದೆ. ಕಾರಿನ ಎರಡೂ ಏರ್ ಬ್ಯಾಗ್ ತೆರೆದುಕೊಂಡಿದ್ದರಿಂದ ಕಾರಿನಲ್ಲಿದ್ದವರಿಗೆ ಯಾವುದೇ ಸಮಸ್ಯೆಯಾಗಿಲ್ಲ. ದ್ವಿಚಕ್ರ ವಾಹನದ ಹಿಂಭಾಗ ಸವಾರ ಕಾಲಿಗೆ ಗಂಭೀರ ಗಾಯವಾಗಿದೆ. ಪೊಲೀಸರು ಆಗಮಿಸಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಬನ್ನೂರು ನಿವಾಸಿ ಅಶ್ರಫ್ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದು, ಹಿಂಬದಿ ಸವಾರನಾಗಿ ಕುದ್ದುಪದವು ನಿವಾಸಿ ಸತೀಶ್ ಇದ್ದರು. ಇಬ್ಬರನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸತೀಶ್ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.