ಜಿಲ್ಲೆ

ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕಗೆ ಗಾಯ

ಸೌಮ್ಯ ಆರ್

ಕೊಕ್ಕಡ: ರಸ್ತೆಗೆ ಅಡ್ಡಲಾಗಿ ಇಟ್ಟಿಗೆ ಇಟ್ಟು ಅದಕ್ಕೆ ಗೋಣಿಚೀಲ ಹಾಕಿ ಯಾವುದೇ ಸೂಚನಾ ಲಕ ಇಡದೆ ರಸ್ತೆ ಮುಚ್ಚಿದ ಪರಿಣಾಮ ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕ ಶಿಬಾಜೆಯ ಅಭಿಲಾಷ್ ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಶಿಬಾಜೆಯ ಕುರುಂಬು ನಿವಾಸಿ ಧರ್ಣಪ್ಪ ಗೌಡ ವಿರುದ್ಧ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಚಾಲಕ ನೀಡಿದ ದೂರಿನ ಮೇರೆಗೆ ಸೋಮವಾರ ಪ್ರಕರಣ ದಾಖಲಾಗಿದೆ. ಜೂನ್ 1ರಂದು ಘಟನೆ ನಡೆದಿದ್ದು, ರಿಕ್ಷಾ ಚಾಲಕ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.