ಹುಣಸೂರು-ಮೈಸೂರು ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಕಾರಿನ ಮುಂಭಾಗ ಜಖಂಗೊಂಡಿರುವುದು. 
ಜಿಲ್ಲೆ

ಕಾರು ಡಿಕ್ಕಿಯಾಗಿ ಮಹಿಳೆ ಸಾವು

ಎ. ಆರ್. ರಘುರಾಮ

ಪಿರಿಯಾಪಟ್ಟಣ: ಪಟ್ಟಣದ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ ಹೊಡೆದುಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಪಟ್ಟಣದ ಉಪ್ಪಾರಗೇರಿ ನಿವಾಸಿ ನಿಂಗಮ್ಮ(65) ಮೃತರು. ಸೋಮವಾರ ಬೆಳಗ್ಗೆ 6.15ರ ಸಮಯದಲ್ಲಿ ಇವರು ಉಪ್ಪಾರಗೇರಿಯ ನಿವಾಸದಿಂದ ಹೊರ ಬಂದು ರಸ್ತೆ ದಾಟುತ್ತಿದ್ದಾಗ ಕುಶಾಲನಗರದ ಕಡೆಯಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆಯಿತು. ತೀವ್ರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿಕ್ಕಿ ಹೊಡೆದ ವಾಹನ ವಶಕ್ಕೆ ಪಡೆಯಲಾಗಿದೆ.