ಗದಗ: ಸಾರಿಗೆ ಸಂಸ್ಥೆಯ ಬಸ್ ಹಾಗೂ ಟಾಟಾ ಸುಮೋ ನಡುವೆ ಡಿಕ್ಕಿ ಸಂಭವಿಸಿ ಸ್ಥಳದಲ್ಲಿ ಐದು ಜನ ಸಾವನ್ನಪ್ಪಿದ್ದು, ಇನ್ನೂ ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಗಂಭೀರ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಗದಗ ಜಿಲ್ಲೆಯ ನರೇಗಲ್ ಪಟ್ಟಣದ ಹೊರ ವಲಯದಲ್ಲಿ ಈ ಘಟನೆ ಸಂಭವಿಸಿದೆ. ಮೂಲಗಳ ಪ್ರಕಾರ, ಕಲಬುರಗಿಯಿಂದ ಗಜೇಂದ್ರಗಡ ಮಾರ್ಗವಾಗಿ ಶಿರಹಟ್ಟಿ ಫಕ್ಕಿರೇಶ್ವರ ಮಠಕ್ಕೆ ಟಾಟಾ ಸುಮೋ ಹೊರಟಿತ್ತು.
ಗದಗದಿಂದ ಗಜೇಂದ್ರಗಡಕ್ಕೆ ಬಸ್ ಹೊರಟಿತ್ತು. ಮುಖಾಮುಖಿ ಡಿಕ್ಕಿ ಪರಿಣಾಮ ಬಸ್ ನಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳಕ್ಕೆ ನರೇಗಲ್ ಪೊಲೀಸರ ಭೇಟಿ, ಪರಿಶೀಲನೆ ನಡೆಸುತ್ತಿದ್ದು, ಮೃತರ ಗುರುತು ಪತ್ತೆ ಇನ್ನೂ ಆಗಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ನರೇಗಲ್ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.