ಜಿಲ್ಲೆ

ಶಿರಸಿ: ಲಾರಿ ಚಕ್ರಕ್ಕೆ ಸಿಲುಕಿ ಶಿಕ್ಷಕಿ ಸಾವು

Uttara Kannada - Subash Hegde

ಶಿರಸಿ: ಬೈಕ್ ನಿಯಂತ್ರಣ ತಪ್ಪಿ ಕೆಳಕ್ಕೆ ಬಿದ್ದ ಮಹಿಳೆಯ ಮೇಲೆ ಲಾರಿ ಹರಿದ ಘಟನೆ ನಗರದ ಹಳೇ ಬಸ್ ನಿಲ್ದಾಣದ ಎದುರು ಸೋಮವಾರ ಬೆಳಗ್ಗೆ ನಡೆದಿದೆ. ಮಹಿಳೆ ಸ್ಥಳದಲ್ಲೇ ಸಾವಿಗೀಡಾಗಿದ್ದಾಳೆ.

ಬಂಡಲ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕಿ ವಿಜಯಾ ಬೋವಿ ಮೃತಪಟ್ಟ ಮಹಿಳೆಯಾಗಿದ್ದಾಳೆ. ತನ್ನ ಪತಿಯೊಂದಿಗೆ ಬೈಕ್ ನಲ್ಲಿ ಇವರು ಹೋಗುತ್ತಿದ್ದಾಗ ಬೈಕ್ ನಿಯಂತ್ರಣ ತಪ್ಪಿದೆ.