ವಿಜಯನಗರ: 76 ನೇ ಗಣರಾಜ್ಯೋತ್ಸವದ (Republic Day) ಸಂಭ್ರಮದ ವೇಳೆ ದೇಶದ ಅತಿ ಎತ್ತರದ 405 ಅಡಿ ಧ್ವಜಸ್ತಂಭದಿಂದ ರಾಷ್ಟ್ರಧ್ವಜ ಹರಿದು ಬಿದ್ದ ಘಟನೆ ವಿಜಯನಗರ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದಿದೆ.
ಗಣರಾಜ್ಯೋತ್ಸವದ ಪ್ರಯುಕ್ತ ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ಸಮಾರಂಭವನ್ನು ಆಯೋಜಿಸಲಾಗಿತ್ತು. ಬೆಳಗ್ಗೆ 08:55ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಧ್ವಜಾರೋಹಣವನ್ನು ನೆರವೇರಿಸಿದ ಬಳಿಕ ಈ ಘಟನೆ ನಡೆದಿದೆ.
ನಾನಾ ಪಡೆಗಳಿಂದ ಗೌರವ ವಂದನೆ ಸ್ವೀಕರಿಸುವ ವೇಳೆ 05 ಅಡಿ ಎತ್ತರದ ಧ್ವಜಸ್ತಂಬದಲ್ಲಿ ಏರುತ್ತಿರುವಾಗಲೇ ರಾಷ್ಟ್ರಧ್ವಜ ಏಕಾಏಕಿ ಹಗ್ಗ ಹರಿದು ಜಾರಿ ಬಿದ್ದಿದೆ. ಕೂಡಲೇ ಎಚ್ಚೆತ್ತ ಸಿಬ್ಬಂದಿ ಧ್ವಜವನ್ನು ಸರಿಪಡಿಸುವ ಕೆಲಸಕ್ಕೆ ಮುಂದಾಗಿದ್ದಾರೆ. ಇನ್ನೂ ಈ ಬಗ್ಗೆ ಮಾತನಾಡಿರುವ ಸಚಿವ ಜಮೀರ್ ಅಹ್ಮದ್, ಯಾರೂ ಆತಂಕ ಪಡಬೇಡಿ, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.