ರಾಮನಗರ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲಕ ಗಾಯಗೊಂಡಿರುವ ಘಟನೆ ಚನ್ನಪಟ್ಟಣದ ಬೈರಾಪಟ್ಟಣ ಬಳಿ ನಡೆದಿದೆ.
ಮೈಸೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಕಾರು ನೂತನ ಹೆದ್ದಾರಿಯಲ್ಲಿ ಬೈರಾಪಟ್ಟಣ ಬಳಿ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿಯೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಪಲ್ಟಿಯಾಗಿದೆ.
ಅಪಘಾತದ ತೀವ್ರತೆಗೆ ಚಾಲಕನ ಪಕ್ಕದ ಆಸನದಲ್ಲಿ ಕೂತಿದ್ದ ವ್ಯಕ್ತಿಗೆ ತೀವ್ರಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಕಾರು ಚಾಲನೆ ಮಾಡುತ್ತಿದ್ದ ಮಹಿಳೆ ಹಾಗೂ ಇತರೆ ಮೂವರು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಈ ಸಂಬಂದ ಚನ್ನಪಟ್ಟಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.