ಜಿಲ್ಲೆ

ಚಿತ್ರದುರ್ಗ ಸಮೀಪ ಲಾರಿ ಡಿಕ್ಕಿ ಹೊಡೆದ ಖಾಸಗಿ ಬಸ್ ಪಲ್ಟಿ: 10 ಜನರಿಗೆ ಗಾಯ

Mysuru Rural

ಚಿತ್ರದುರ್ಗ: ತಾಲೂಕಿನ ಕುಂಚಿಗನಾಳ ಗ್ರಾಮದ ಬಳಿ ಖಾಸಗಿ ಬಸ್ ಒಂದು ಪಲ್ಟಿಯಾಗಿ ಅಪಘಾತ ಸಂಭವಿಸಿದ್ದು, 10 ಜನ ಗಾಯಗೊಂಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಖಾಸಗಿ ಬಸ್​ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ, ಬಸ್​ ಚಾಲಕನ ನಿಯಂತ್ರಣ ತಪ್ಪಿ ಈ ದುರಂತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಹರಿಹರದಿಂದ ಬೆಂಗಳೂರಿಗೆ ಹೋಗುತ್ತಿದ್ದ ಖಾಸಗಿ ಬಸ್​ನಲ್ಲಿ ಹರಿಹರ, ಚಿತ್ರದುರ್ಗ ಆಸುಪಾಸಿನ ಜನ ಪ್ರಯಾಣಿಸುತ್ತಿದ್ದರು. ಬುಧವಾರ ನಸುಕಿನ 2.30ರಿಂದ 3 ಗಂಟೆ ನಡುವೆ ಈ ಅಪಘಾತ ಸಂಭವಿಸಿದೆ.

ಅಪಘಾತವಾದ ಕೂಡಲೇ ಬಸ್ ಚಾಲಕ ಸ್ಥಳದಿಂದ ನಾಪತ್ತೆಯಾಗಿದ್ದಾನೆ. ಗಾಯಗೊಂಡವರನ್ನು ಕೂಡಲೇ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಪೈಕಿ ಮೂವರಿಗೆ ಹೆಚ್ಚಿನ ಏಟಾಗಿದ್ದು, ಉಳಿದವರ ಪರಿಸ್ಥಿತಿ ಸುಧಾರಿಸಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.