ಜಿಲ್ಲೆ

ಟಿಪ್ಪರ್ ಲಾರಿ -ಕೆಎಸ್ಸಾರ್ಟಿಸಿ ಬಸ್ ಮುಖಾಮುಖಿ ಡಿಕ್ಕಿ - ಒಂದು ಸಾವು

shastrimath

ಆನೇಕಲ್: ಆನೇಕಲ್ ಸಮೀಪದ ತಟ್ಟೆಕೆರೆ ಗ್ರಾಮದಲ್ಲಿ ನಿನ್ನೆ ಟಿಪ್ಪರ್ ಲಾರಿ ಮತ್ತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್​ಆರ್ಟಿಸಿ) ಬಸ್​ ಮುಖಾಮುಖಿ ಡಿಕ್ಕಿಯಾಗಿದ್ದು, ಬಸ್ ಚಾಲಕ ಗಂಭೀರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಇಂದು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ಬಸ್​ ಚಾಲಕನನ್ನು ಅಭಿನ್ ಜಾನ್ (55) ಎಂದು ಗುರುತಿಸಲಾಗಿದೆ. ಹಾರೋಹಳ್ಳಿಯಿಂದ ಆನೇಕಲ್​ಗೆ ಸಂಚರಿಸುತ್ತಿದ್ದ ಬಸ್​ಗೆ ಎದುರಿನಿಂದ ಬಂದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ. ಬಸ್​ ಚಾಲಕ ಕೂರುವ ಭಾಗ ಸಂಪೂರ್ಣ ಜಜ್ಜಿ ಹೋಗಿದೆ. ಅಪಘಾತವಾದ ಬೆನ್ನಿಗೆ ಟಿಪ್ಪರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

ಗಾಯಗೊಂಡಿದ್ದ ಅಭಿನ್ ಜಾನ್ ನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಬಸ್​ನಲ್ಲಿದ್ದ ಐದಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಈ ಸಂಬಂಧ ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್)