ಮಂಡ್ಯ: ತಾಲೂಕಿನ ಯಲಿಯೂರು ಗ್ರಾಮದ ಸಮೀಪ ಶನಿವಾರ ಮುಂಜಾನೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕು ದೊಡ್ಡತುಪ್ಪೂರು ಗ್ರಾಮದ ಲೋಕೇಶ್(38) ಮೃತ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮಿಮ್ಸ್‌ಗೆ ರವಾನಿಸಿ ಮರಣೋತ್ತರ ಪರೀಕ್ಷೆ ನಡೆಸಿ ಬಳಿ ವಾರಸುದಾರರಿಗೆ ಹಸ್ತಾಂತರ ಮಾಡಲಾಯಿತು. ಘಟನೆ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.