ಜಿಲ್ಲೆ

ಅಪಘಾತ: ಪಾದಾಚಾರಿ ಸಾವು

ರಾಚಯ್ಯ ಸ್ವಾಮಿ

ರಾಯಚೂರು: ಅಪರಿಚಿತ ವಾಹನ ಡಿಕ್ಕಿ ಹೊಡೆದು ಪಾದಾಚಾರಿಯೊಬ್ಬರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ನಗರ ಆಟೋ ನಗರದಲ್ಲಿ ಶುಕ್ರವಾರ ಜರುಗಿದೆ.
ಮೃತ ವ್ಯಕ್ತಿಯನ್ನು ಮಡ್ಡಿಪೇಟೆ ನಿವಾಸಿ ಈರಣ್ಣ ಮಡಿವಾಳರ (55) ಎಂದು ಗುರುತಿಸಲಾಗಿದೆ. ಅಪಘಾತದ ಬಳಿಕ ವಾಹನದೊಂದಿಗೆ ಚಾಲಕ ಪರಾರಿಯಾಗಿದ್ದು, ಸ್ಥಳೀಯರು ರಸ್ತೆ ಪಕ್ಕದಲ್ಲಿ ಶವವಾಗಿ ಬಿದ್ದಿರುವುದನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಸಂಚಾರಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದು, ಡಿಕ್ಕಿ ಹೊಡೆದ ವಾಹನ ಯಾವುದು ಎಂದು ತನಿಖೆ ನಡೆಸುತ್ತಿದ್ದಾರೆ.