ಜಿಲ್ಲೆ

ವಸತಿ ನಿಲಯ ವಿದ್ಯಾರ್ಥಿಗಳಿಗೆ ವರದಾನ

ಪ್ರಶಾಂತ ಹೂಗಾರ

ಚಿಕ್ಕೋಡಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಮಂಜೂರಾದ ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ ಕಟ್ಟಡವನ್ನು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಈಚೆಗೆ ಉದ್ಘಾಟಿಸಿದರು.

ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಮಾತನಾಡಿ, ಬಡ ಹಾಗೂ ಹಿಂದುಳಿದ ವಿದ್ಯಾರ್ಥಿಗಳಿಗೆ ವಸತಿ ನಿಲಯ ವರದಾನವಾಗಲಿದೆ ಎಂದರು.

ಪಾದನಾ ಚರಮೂರ್ತಿ ಮಠದ ಶ್ರೀ ಸಂಪಾದನಾ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಉಪವಿಭಾಗಾಧಿಕಾರಿ ಸುಭಾಷ ಸಂಪಗಾಂವಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಶಿವಪ್ರಿಯಾ ಕಡೇಚೂರ, ತಹಸೀಲ್ದಾರ್ ಸಿ.ಎಸ್.ಕುಲಕರ್ಣಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಎಸ್.ಕಾದ್ರೋಳಿ, ತಾಲೂಕು ಹಿಂದುಳಿದ ವರ್ಗಗಳ ಅಧಿಕಾರಿ ವೀಣಾ ಮನಗೂಳಿ ಇತರರಿದ್ದರು.