ಬಂಟ್ವಾಳ: ಬಿ.ಸಿ.ರೋಡಿನ ಎಸ್‌ಬಿಐ ಬ್ಯಾಂಕ್‌ನಿಂದ ಹಣ ಡ್ರಾ ಮಾಡಿದ ಮಾಜಿ ಸೈನಿಕರೊಬ್ಬರ ಹಣದ ಬ್ಯಾಗ್ ಕಳವು ಮಾಡಿದ ಆರೋಪಿಯನ್ನು ಬಂಟ್ವಾಳ ಪೊಲೀಸರ ತಂಡ ಬಂಧಿಸಿದೆ.
ಬೆಳ್ತಂಗಡಿ ನಿವಾಸಿ ಮಹಮ್ಮದ್ ಫಾರೂಕ್(32) ಎಂಬಾತನನ್ನು ಬಂಟ್ವಾಳ ಸರಪಾಡಿಯ ಮಣಿನಾಲ್ಕೂರು ಎಂಬಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಿ.ಸಿ ರೋಡ್ ಎಸ್‌ಬಿಐ ಬ್ಯಾಂಕಿನಲ್ಲಿ ಸೆ.4ರಂದು ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯ ಪತ್ತೆಗಾಗಿ ರಚಿಸಲಾಗಿದ್ದ ಬಂಟ್ವಾಳ ಉಪವಿಭಾಗದ ವಿಶೇಷ ತನಿಖಾ ತಂಡ ಆರೋಪಿಯನ್ನು ಬಂಧಿಸಿ 80 ಸಾವಿರ ರೂ. ನಗದು ವಶಪಡಿಸಿಕೊಂಡಿದೆ.