ಬೆಳಗಾವಿ: ಬೆಳಗಾವಿಯಲ್ಲಿ ನಡೆದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದ ಆರೋಪಿಗಳನ್ನು 15 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ನ್ಯಾಯಾಲಯ ಆದೇಶಿಸಿದೆ. ಸೋಮವಾರ ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿಗಳಿಗೆ 15 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶ ಮಾಡಿದ ಬೆನ್ನಲ್ಲೇ ಐವರು ಆರೋಪಿಗಳ ಪೈಕಿ ಮೂವರು ಆರೋಪಿಗಳನ್ನು ಹಿಂಡಲಗಾ ಜೈಲಿಗೆ ರವಾನೆ ಮಾಡಿದ್ದಾರೆ. ಇಬ್ಬರು ಅಪ್ರಾಪ್ತ ಆರೋಪಿಗಳನ್ನು ರಿಮಾಂಡ್ ಹೋಂಗೆ ಕಳುಹಿಸಿದ್ದಾರೆ. ಇನ್ನೋರ್ವ ಆರೋಪಿಗಾಗಿ ಬಲೆ ಬೀಸಿದ್ದಾರೆ. ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.