ವಿಜಯಪುರ ನಗರದ ಬಿ.ಎಂ. ಪಾಟೀಲ ಕಾಲೇಜ್ ಆವರಣದಲ್ಲಿ ಬಿ.ಎಂ. ಪಾಟೀಲ ಕಾಲೇಜು ಹಾಗೂ ಶಾಲೆ ಶಿಕ್ಷಣ ಇಲಾಖೆ ( ಪದವಿಪೂರ್ವ ವಿಭಾಗ) ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ಬಿಎಲ್‌ಡಿಇ ಸಂಸ್ಥೆಯ ಆಡಳಿತಾಧಿಕಾರಿ ಬಿ.ಆರ್.ಪಾಟೀಲವ ಉದ್ಘಾಟಿಸಿದರು. ಪ್ರಾಚಾರ್ಯ ನವೀನ.ಎಸ್ , ಗಣೇಶ್ ಗುನ್ನಾಪುರ, ಎಸ್. ಎಸ್. ರೂಡಗಿ ಇದ್ದರು. 
ಜಿಲ್ಲೆ

ಕ್ರೀಡೆಯಲ್ಲಿ ರಾಷ್ಟ್ರಮಟ್ಟದ ಸಾಧನೆಮಾಡಿ

ಗಿರೀಶ ಸಗರ

ವಿಜಯಪುರ : ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ. ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು. ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ಬಿಎಲ್‌ಡಿಇ ಸಂಸ್ಥೆಯ ಆಡಳಿತಾಧಿಕಾರಿ ಬಿ.ಆರ್. ಪಾಟೀಲ ಹೇಳಿದರು.

ನಗರದ ಬಿ.ಎಂ. ಪಾಟೀಲ ಕಾಲೇಜ್ ಆವರಣದಲ್ಲಿ ಬಿ.ಎಂ. ಪಾಟೀಲ ಕಾಲೇಜು ಹಾಗೂ ಶಾಲೆ ಶಿಕ್ಷಣ ಇಲಾಖೆ (ಪದವಿಪೂರ್ವ ವಿಭಾಗ ) ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.

ಸದೃಢ ದೇಹದಲ್ಲಿ ಸದೃಢ ಮನಸ್ಸು ಇರುತ್ತದೆ ಎಂಬ ತತ್ವದಲ್ಲಿ ನಂಬಿಕೆ ಇಟ್ಟು ಮಕ್ಕಳು ಕ್ರೀಡೆಯಲ್ಲಿ ತಮ್ಮ ಸಾಮರ್ಥ್ಯವನ್ನು ಬೆಳೆಸಿಕೊಂಡು ರಾಜ್ಯ, ರಾಷ್ಟ್ರಮಟ್ಟದಲ್ಲಿ ಸಾಧನೆ ತೋರಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಸ್.ಎಸ್. ಕೋರಿ ಮಾತನಾಡಿ, ವಿಜಯಪುರ ಜಿಲ್ಲೆ ಕ್ರೀಡೆಗೆ ಪ್ರಸಿದ್ಧವಾಗಿದ್ದು ಇಲ್ಲಿನ ಅನೇಕ ಕ್ರೀಡಾಪಟುಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರತಿಭೆ ಸಾರಿದ್ದಾರೆ.

ಕ್ರೀಡಾ ಮನೋಭಾವ ಬಳಸಿಕೊಂಡು ಕ್ರೀಡಾಕೂಟದಲ್ಲಿ ಕ್ರೀಡಾ ಸ್ಪೂರ್ತಿ ಸಾರಬೇಕು ಎಂದು ಹೇಳಿದರು.

ಪ್ರಾಚಾರ್ಯ ನವೀನ ಎಸ್ , ಗಣೇಶ್ ಗುನ್ನಾಪುರ, ಎಸ್.ಎಸ್. ರೂಡಗಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕ್ರೀಡಾಕೂಟದಲ್ಲಿ ಲಾಂಗ್ ಟೆನಿಸ್, ಈಜು, ಯೋಗ, ಬಾಸ್ಕೆಟ್ ಬಾಲ್, ಕರಾಟೆ ಮುಂತಾದ ಕ್ರೀಡೆಗಳಲ್ಲಿ ಜಿಲ್ಲೆ ವಿವಿಧ ಕಾಲೇಜುಗಳಿಂದ ಕ್ರೀಡಾಪಟುಗಳು ಭಾಗವಹಿಸಿದ್ದರು.