ಜಿಲ್ಲೆ

ರಾಜ್ಯ ಮಟ್ಟದ ಸಾಧನೆ

Dharwada - Basavaraj Idli

ಹುಬ್ಬಳ್ಳಿ: ತುಮಕೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಸಾಂಸ್ಕೃತಿಕ ಚಟುವಟಿಕೆ ಸ್ಪರ್ಧೆಯಲ್ಲಿ ಜ್ಯೋತಿ ಅಂಗಡಿ ದ್ವೀತಿಯ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ.

ಧಾರವಾಡ ಜಿಲ್ಲೆಯ ಕಮಲಮ್ಮ ತಿರುಕಪ್ಪ ಮಂಟೂರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿನಿ ಜ್ಯೋತಿ ಅಂಗಡಿ ಜಾನಪದ ಹಾಡು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

ಜ್ಯೋತಿ ಸಾಧನೆಗೆ ಪದವಿ ಪೂರ್ವ ಶಿಣ ಇಲಾಖೆಯ ಉಪನಿರ್ದೇಶಕ ಕೆ.ಪಿ. ಸುರೇಶ್, ಕಾಲೇಜಿನ ಪ್ರಾಂಶುಪಾಲ ಡಿ. ಹನುಮಂತಪ್ಪ, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಸುಭಾಸ ಮಂಟೂರ ಅಭಿನಂದಿಸಿದ್ದಾರೆ.