ಮಾನ್ವಿ: ಸರ್ಕಾರಿ ಶಾಲಾ ಮಕ್ಕಳಿಗೆ ನೀಡಲಾದ ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಬಿಸಿಯೂಟ ಸೇರಿ ವಿವಿಧ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಹಸೀಲ್ದಾರ್ ಭೀಮರಾಯ ರಾಮಸಮುದ್ರ ಹೇಳಿದರು.
ಇದನ್ನೂ ಓದಿ: ರಾಜ್ಯದಲ್ಲಿ ಶೇ. 68 ಪಠ್ಯಪುಸ್ತಕ ಪೂರೈಕೆ
ಪಟ್ಟಣದ ಸರ್ಕಾರಿ ಪಿ.ಎಂ.ಶ್ರೀ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಮಕ್ಕಳಿಗೆ ಪಠ್ಯಪುಸ್ತಕ ವಿತರಿಸಿ ಮಾತನಾಡಿದರು. ಜ್ಞಾನವಿಲ್ಲದಿದ್ದರೆ ಸಾಧನೆ ಅಸಾಧ್ಯ. ಶಿಕ್ಷಣ ಶಿಸ್ತು ಕಲಿಸುತ್ತದೆ. ಚೆನ್ನಾಗಿ ಓದಿ ಶಾಲೆಗೆ ಹೆಸರು ತರಬೇಕು ಎಂದರು. ಮುಖ್ಯಶಿಕ್ಷಕ ಹಂಪಣ್ಣ ಚಂಡೂರ, ಕ್ಷೇತ್ರ ಶಿಕ್ಷಣ ಸಂಯೋಜಕ ಮಹಮ್ಮದ್ ಯೂನುಸ್, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಸುರೇಶ ಕುರ್ಡಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಸಂಗಮೇಶ ಇತರರಿದ್ದರು.