ವಿಜಯಪುರದ ಆಕ್ಸಫರ್ಡ್ ಶಾಲೆಯಲ್ಲಿ ನಡೆದ ಮಕ್ಕಳ ದಿನಾಚರಣೆಯಲ್ಲಿ ಕರಾಟೆ ಪಟು ಸಮೃದ್ಧಿ ಭೋವಿ ವಿದ್ಯಾರ್ಥಿನಿಗೆ ಸನ್ಮಾನಿಸಲಾಯಿತು. ರಾಜಶೇಖರ ಕೌಲಗಿ, ಅನುಸುಯಾ ಅಮರಣ್ಣನವರ, ಪ್ರದೀಪ ಲಿಂಗದಳ್ಳಿ ಮತ್ತಿತರರಿದ್ದಾರೆ. 
ಜಿಲ್ಲೆ

ಉತ್ತಮ ಹವ್ಯಾಸದಿಂದ ಸಾಧನೆ ಸಾಧ್ಯ

ವಿಜಯಪುರ : ಮಕ್ಕಳು ಉತ್ತಮ ಹವ್ಯಾಸಗಳನ್ನು ಹಾಗೂ ಸೃಜನಶೀಲತೆಯನ್ನು ರೂಢಿಸಿಕೊಳ್ಳಬೇಕು ಎಂದು ಆಕ್ಸಫರ್ಡ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಪ್ರದೀಪ ಲಿಂಗದಳ್ಳಿ ಹೇಳಿದರು.

ಇಲ್ಲಿನ ಆದರ್ಶ ನಗರದ ಆಕ್ಸಫರ್ಡ್ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮಕ್ಕಳ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಜವಾಹರಲಾಲ್ ನೆಹರು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.

ಎಕ್ಸಲಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ನಿರ್ದೇಶಕ ರಾಜಶೇಖರ ಕೌಲಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕರಾಟೆ ಸ್ಪರ್ಧೆಯಲ್ಲಿ ಜಿಲ್ಲೆ, ರಾಜ್ಯಮಟ್ಟದಲ್ಲಿ ಸಾಧನೆಗೈದ ಎಕ್ಸಲಂಟ್ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಸಮೃದ್ಧಿ ಭೋವಿ ವಿದ್ಯಾರ್ಥಿನಿ ಸನ್ಮಾನಿಸಲಾಯಿತು.

ಮುಖ್ಯ ಗುರುಮಾತೆ ಅನುಸುಯಾ ಅಮರಣ್ಣನವರ ವೇದಿಕೆಯಲ್ಲಿದ್ದರು. ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಮಕ್ಕಳ ದಿನಾಚರಣೆ ಹಿನ್ನೆಲೆ ನಡೆದ ಸ್ಪರ್ಧೆೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ನೀಡಲಾಯಿತು. ಸುರೇಶ ಪಾಟೀಲ ಸ್ವಾಗತಿಸಿ ಪರಿಚಯಿಸಿದರು. ರಾನು ಜೈನ್ ನಿರೂಪಿಸಿದರು. ಎಂ.ಐ. ಶೇಖ ವಂದಿಸಿದರು. ಮಕ್ಕಳಿಗೆ ಸಿಹಿ ಹಂಚಲಾಯಿತು.