ಕೊಕ್ಕರ್ಣೆ: ನಾಲ್ಕೂರು ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಅಂಕಿತಾ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಹುಡುಗಿಯರ ಸೀನಿಯರ್ ವಿಭಾಗದ ಹ್ಯಾಮರ್ ಥ್ರೋ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿ ಆದಿತ್ಯ ತಾಲೂಕುಮಟ್ಟದ ಕ್ರೀಡಾಕೂಟದಲ್ಲಿ ಶಾರ್ಟ್‌ಪುಟ್‌ನಲ್ಲಿ ಪ್ರಥಮ, 600 ಮೀಟರ್ ಓಟದಲ್ಲಿ ಪ್ರಥಮ, 400 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಗಳಿಸಿ ಜಿಲ್ಲಾಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿನಿ ಸಂಚನಾ ತಾಲೂಕು ಮಟ್ಟದ ಕ್ರೀಡಾಕೂಟ ಡಿಸ್ಕಸ್‌ನಲ್ಲಿ ದ್ವಿತೀಯ, ಶಾರ್ಟ್‌ಪುಟ್‌ನಲ್ಲಿ ತೃತೀಯ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಶಿಕ್ಷಕ ವೃಂದ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಹಳೇ ವಿದ್ಯಾರ್ಥಿಗಳು, ಪಾಲಕರು ಅಭಿನಂದನೆ ಸಲ್ಲಿಸಿದ್ದಾರೆ.