ಸಿದ್ದಾಪುರ: ಅಮ್ಮತ್ತಿಯಲ್ಲಿ ನಡೆದ ವಲಯ ಮಟ್ಟದ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಚೆನ್ನಯ್ಯನಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ.
ವಿರಾಜಪೇಟೆ ತಾಲೂಕಿನ ಚೆನ್ನಯ್ಯನಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ಪ್ರಥಮ, ದ್ವಿತೀಯ ಸ್ಥಾನ ಗಳಿಸುವ ಮೂಲಕ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.