ವಿಜಯವಾಣಿ ಸುದ್ದಿಜಾಲ ಪಾತಪಾಳ್ಯ
ಆಸಕ್ತಿ ಇದ್ದಾಗ ಮಾತ್ರ ಗುರಿ ಸಾಧಿಸಲು ಸಾಧ್ಯ ಎಂದು ಗ್ರಾಮ ವಿಕಾಸ ಲೋಕ ಸೇವಾ ಪ್ರತಿಷ್ಠಾನದ ಮಹಿಳಾ ಸಂಯೋಜಕಿ ರಾಧಮ್ಮ ತಿಳಿಸಿದರು.
ಆಚಗಾನಪಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಬೆಂಗಳೂರಿನ ಗ್ರಾಮ ವಿಕಾಸ ಲೋಕ ಸೇವಾ ಪ್ರತಿಷ್ಠಾನದಿಂದ ಹಮ್ಮಿಕೊಂಡಿದ್ದ ಕಲಿಕಾ ಸಾಮಗ್ರಿ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿ, ಸಮಾಜದಲ್ಲಿ ಬದುಕಲು ಶಿಕ್ಷಣದ ಜತೆಗೆ ಮಾನವೀಯ ಮೌಲ್ಯಗಳು ಹಾಗೂ ಕೌಶಲಗಳು ಅವಶ್ಯವಾಗಿವೆ. ಹಾಗೆಯೇ ಶಿಕ್ಷಣದೊಂದಿಗೆ ಸಂಸ್ಕಾರವನ್ನೂ ಮಕ್ಕಳಿಗೆ ಕಲಿಸಬೇಕು ಎಂದರು.
ಅತಿಥಿ ಶಿಕ್ಷಕಿ ಪ್ರಭಾವತಿ ಮಾತನಾಡಿ, ವಿದ್ಯಾರ್ಥಿಗಳು ಸಿಗುವ ಅವಕಾಶಗಳನ್ನು ಸಂಪೂರ್ಣವಾಗಿ ಬಳಸಿಕೊಳ್ಳಬೇಕು. ಇದರಿಂದ ಗುರಿ ಸಾಧನೆಯ ಹಾದಿ ಸುಗಮವಾಗುತ್ತದೆ ಎಂದರು.