ಕಾರ್ಕಳ: ಯೋಜನಾಬದ್ಧ ಅಧ್ಯಯನ, ಶಿಸ್ತುಬದ್ಧ ಕಲಿಕೆಯಿಂದ ಉನ್ನತ ಗುರಿ ತಲುಪಲು ಸಾಧ್ಯ. ವಾಣಿಜ್ಯ ವಿದ್ಯಾರ್ಥಿಗಳಿಗೆ ಇಂದು ಬಹಳಷ್ಟು ಅವಕಾಶಗಳಿದ್ದು, ಜಾಗತೀಕರಣ ಮತ್ತು ತಂತ್ರಜ್ಞಾನಗಳ ಬಳಕೆಯಿಂದ ವಾಣಿಜ್ಯ ಕ್ಷೇತ್ರದಲ್ಲಿ ಇಂದು ಉದ್ಯೋಗಾವಕಾಶಗಳು ಹೆಚ್ಚಿನ ಯುವಜನತೆಯನ್ನು ಆಕರ್ಷಿಸುತ್ತಿವೆ ಎಂದು ತ್ರಿಷಾ ಸಮೂಹ ಸಂಸ್ಥೆಗಳ ಸಂಸ್ಥಾಪಕ ಸಿಎ ಗೋಪಾಲಕೃಷ್ಣ ಭಟ್ ಹೇಳಿದರು.
ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಹಾಗೂ ಪಾಲಕರಿಗೆ ನಡೆದ ವೃತ್ತಿಪರ ಕೋರ್ಸುಗಳ ವಾರ್ಗದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾಲೇಜಿನ ಉಪಪ್ರಾಂಶುಪಾಲೆ ಉಷಾ ರಾವ್ ಯು., ಪಿಆರ್‌ಒ ಜ್ಯೋತಿ ಪದ್ಮನಾಭ ಭಂಡಿ, ಡೀನ್ ಮಿಥುನ್ ಯು., ವಾಣಿಜ್ಯ ವಿಭಾಗ ಮುಖ್ಯಸ್ಥೆ ಸುಮಿತ್ರಾ, ಉಪನ್ಯಾಸಕ ಶೈಲೇಶ್ ಶೆಟ್ಟಿ ಮತ್ತು ಮಂಜುನಾಥ್ ಮುದೂರು ಉಪಸ್ಥಿತರಿದ್ದರು. ಕಾಲೇಜಿನ ಉಪ ಪ್ರಾಂಶುಪಾಲೆ ಸಾಹಿತ್ಯ ಸ್ವಾಗತಿಸಿದರು. ಆಂಗ್ಲಭಾಷಾ ವಿಭಾಗ ಮುಖ್ಯಸ್ಥೆ ಸಂಗೀತಾ ಕುಲಾಲ್ ನಿರೂಪಿಸಿದರು.