ಅಚ್ಲಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಸಾಮಾನ್ಯ ವಾರ್ಷಿಕ ಮಹಾಸಭೆಯಲ್ಲಿ ನಿವೃತ್ತಿ ಹೊಂದಲಿರುವ ಒಕ್ಕೂಟದ ಉಪ ವ್ಯವಸ್ಥಾಪಕ ಡಾ.ಅನಿಲಕುಮಾರ ಶೆಟ್ಟಿಯ ಅವರನ್ನು ಸನ್ಮಾನಿಸಲಾಯಿತು 
ಜಿಲ್ಲೆ

ಅಚ್ಲಾಡಿ ಸಹಕಾರ ಸಂಘ ಮಹಾಸಭೆ, ಸನ್ಮಾನ

ಕೋಟ: ಅಚ್ಲಾಡಿ ಹಾಲು ಉತ್ಪಾದಕರ ಸಹಕಾರ ಸಂಘ 2023-24ನೇ ಸಾಲಿನ ಸಾಮಾನ್ಯ ವಾರ್ಷಿಕ ಮಹಾಸಭೆ ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆ ಸಭಾಂಗಣದಲ್ಲಿ ಇತ್ತೀಚೆಗೆ ಜರುಗಿತು.

ಸಂಘದ ಅಧ್ಯಕ್ಷ ಗುಂಡ ಶೆಟ್ಟಿ ಅಧ್ಯಕ್ಷತೆ ವಹಿಸಿ ವಾರ್ಷಿಕ ಲೆಕ್ಕಪತ್ರ ಮಂಡಿಸಿ, ಸಂಘ 2,96,885.77 ರೂ.ನಿವ್ವಳ ಲಾಭ ಗಳಿಸಿದ್ದು, ಹಾಲು ಉತ್ಪಾದಕರ ಬೋನಸ್ 1,27,653.04 ರೂ., ಹಾಲಿನಿಂದ ಲಾಭ ಶೇ.20ರಂತೆ 9,800 ರೂ. ನೀಡುವುದಾಗಿ ತಿಳಿಸಿದರು.
ನ.30ರಂದು ನಿವೃತ್ತಿ ಹೊಂದಲಿರುವ ಒಕ್ಕೂಟದ ಉಪ ವ್ಯವಸ್ಥಾಪಕ ಡಾ.ಅನಿಲಕುಮಾರ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

ಶಿರಿಯಾರ ವಿಎಸ್‌ಎಸ್‌ಎನ್ ಬ್ಯಾಂಕ್ ಸಿಇಒ ಚಂದ್ರಶೇಖರ್ ಶೆಟ್ಟಿ ಮಾತನಾಡಿ ನಮ್ಮ ಬ್ಯಾಂಕ್‌ನಿಂದ ಹೈನುಗಾರಿಕೆಗೆ ಹೆಚ್ಚು ಉತ್ತೇಜನ ನೀಡುತ್ತಿದ್ದು ಅದನ್ನು ಸದಸ್ಯರು ಪಡೆಯಲು ತಿಳಿಸಿದರು.

ಸಭೆ ವಿಸ್ತರಣಾಧಿಕಾರಿ ಸರಸ್ವತಿ, ಮಾಜಿ ಅಧ್ಯಕ್ಷ ಬಿ.ಭೋಜ ಶೆಟ್ಟಿ, ಚಂದ್ರಶೇಖರ್ ಶೆಟ್ಟಿ, ಸುರೇಂದ್ರ ಶೆಟ್ಟಿ, ಮಾಜಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಮಂಜು ಮರಕಾಲ, ಸಂಘದ ಉಪಾಧ್ಯಕ್ಷ ಕೆ.ಗುಂಡು ಶೆಟ್ಟಿ, ನಿರ್ದೇಶಕರಾದ ಕೆ.ಲಕ್ಷಣ ಶೆಟ್ಟಿ , ವಿ.ವಿಠ್ಠಲ ಶೆಟ್ಟಿ, ಜಯಂತಿ ಶೆಟ್ಟಿ, ಅನಿತಾ ಶೆಟ್ಟಿ, ಗೀತಾ ಶೆಟ್ಟಿ, ಗಿರಿಜಾ, ಸಂಧ್ಯಾ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂತೋಷ ಪೂಜಾರಿ ಮತ್ತು ಸಿಬ್ಬಂದಿ ಲಕ್ಷ್ಮೀ ದೇವಾಡಿಗ ಮತ್ತು ಶ್ರೀಮತಿ ಆಚಾರ್ ಉಪಸ್ಥಿತರಿದ್ದರು.