ಕೋಲಾರ ಜಿಲ್ಲಾಳಿತ ಭವನದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಂದಾಯ ಇಲಾಖೆಯ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಅಕ್ರಂಪಾಷ ಮಾತನಾಡಿದರು. ಅಪರ ಜಿಲ್ಲಾಧಿಕಾರಿ ಮಂಗಳಾ ಇದ್ದರು.  
ಜಿಲ್ಲೆ

ಬದ್ಧತೆಯಿಂದ ಕಾರ್ಯನಿರ್ವಹಿಸಿ

ಕೋಲಾರ ಜಿಲ್ಲಾಳಿತ ಭವನದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಂದಾಯ ಇಲಾಖೆಯ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಅಕ್ರಂಪಾಷ ಮಾತನಾಡಿದರು. ಅಪರ ಜಿಲ್ಲಾಧಿಕಾರಿ ಮಂಗಳಾ ಇದ್ದರು.

ಕೋಲಾರ ಡೆಸ್ಕ್

ಕಂದಾಯ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಡಿಸಿ ಅಕ್ರಂಪಾಷಾ ಸೂಚನೆ

ಕೋಲಾರ: ನೌಕರರು ತಮ್ಮ ಕೆಲಸಗಳಲ್ಲಿ ಬದ್ಧತೆ, ಸಾರ್ವಜನಿಕರ ಪರ ಕಾಳಜಿ ತೋರಬೇಕು. ರೈತರು ತಮ್ಮ ಜಮೀನುಗಳ ಮಾಹಿತಿಯನ್ನು ಫ್ರೂಟ್ಸ್​ ತಂತ್ರಾಂಶದಲ್ಲಿ ಅಳವಡಿಸಿಕೊಳ್ಳುವ ಮೂಲಕ ಬರ ಪರಿಹಾರ ಹಾಗೂ ವಿಮಾ ಪರಿಹಾರಗಳಂತ ಸೌಲಭ್ಯ ಪಡೆದುಕೊಳ್ಳುವ ನಿಟ್ಟಿನಲ್ಲಿ ಇಲಾಖೆ ಅಧಿಕಾರಿಗಳು ರೈತರಲ್ಲಿ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಅಕ್ರಂಪಾಷಾ ಅವರು ಕಂದಾಯ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕಂದಾಯ ಇಲಾಖೆಯ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಸರ್ಕಾರದ ಪರಿಹಾರ ಮೊತ್ತಗಳನ್ನು ರೈತರಿಗೆ ನೇರವಾಗಿ ಬ್ಯಾಂಕ್​ ಖಾತೆಗೆ ಜಮೆ ಮಾಡಲು ಫ್ರೂಟ್ಸ್​ ತಂತ್ರಾಂಶ ಬಳಸಲಾಗುತ್ತಿದೆ.
ರೈತರೆಲ್ಲರೂ ತಮ್ಮ ಜಮೀನಿನ ನಿಖರವಾದ ಮಾಹಿತಿ ತಂತ್ರಾಂಶದಲ್ಲಿ ಅಳವಡಿಸಿಕೊಳ್ಳುವ ಮೂಲಕ ಪರಿಹಾರ ಪಡೆದುಕೊಳ್ಳಬೇಕು. ಅಧಿಕಾರಿಗಳು ರೈತರಿಗೆ ಈ ಮಾಹಿತಿ ಒದಗಿಸಬೇಕು. ಜಿಲ್ಲೆಯಲ್ಲಿ ಫ್ರೂಟ್​ ತಂತ್ರಾಂಶದಲ್ಲಿ ಈಗಾಗಲೇ ನೋಂದಣಿ ಮಾಡಲಾಗಿದ್ದು. ಬಾಕಿ ಉಳಿದ ರೈತರು ನೋಂದಣಿ ಕಾರ್ಯವನ್ನು ಈ ತಿಂಗಳ ಅಂತ್ಯದೊಳಗೆ ಪೂರ್ಣಗೊಳಿಸಬೇಕು ಎಂದರು.
ಜಿಲ್ಲೆಯಲ್ಲಿ ಬರ ಆವರಿಸುತ್ತಿರುವ ಹಿನ್ನೆಲೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರು ಹಾಗೂ ಮೇವಿನ ಕೊರತೆಯಾಗದಂತೆ ಮುಂಜಾಗ್ರತೆ ತೆಗೆದುಕೊಳ್ಳಬೇಕು. ಮೇವಿನ ಕೊರತೆ ಇದ್ದಲ್ಲಿ ಅಗತ್ಯಕ್ಕನುಸಾರ ಮೇವು ಖರೀದಿ ಮಾಡುವಂತೆ ಸೂಚಿಸಿದರು.
ನೀರಿನ ವ್ಯವಸ್ಥೆ ಇರುವೆಡೆ ರೈತರಿಗೆ ಮೇವಿನ ಬೀಜದ ಕಿಟ್​ಗಳನ್ನು ನೀಡಲಾಗುವುದು. ಅವರು ಮೇವನ್ನು ಬೆಳೆದು ತಮ್ಮ ಜಾನುವಾರುಗಳಿಗೆ ಬಳಸಿಕೊಳ್ಳಬಹುದಾಗಿದೆ. ಸರ್ಕಾರಕ್ಕೆ ನಿಗದಿಪಡಿಸಿದ ದರದಲ್ಲಿ ಮಾರಾಟ ಮಾಡಬಹುದು. ಈ ಕುರಿತು ರೈತರಲ್ಲಿ ಜಾಗೃತಿ ಮೂಡಿಸಿ ಜಿಲ್ಲೆಯಲ್ಲಿ ಮೇವಿನ ಕೊರತೆ ಆಗದಂತೆ ನಿಗಾವಹಿಸಲು ತಿಳಿಸಿದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ಡಾ.ಮೈತ್ರಿ, ಸೇರಿದಂತೆ ಜಿಲ್ಲೆಯ ಎಲ್ಲಾ ತಹಶೀಲ್ದಾರರು, ಕಂದಾಯ ನೀರಿಕ್ಷಕರು, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಇದ್ದರು.

ಸರ್ಕಾರಿ ಭೂಮಿ ರಕ್ಷಣೆಗೆ ಬೀಟ್​ ಪದ್ಧತಿ
ಸರ್ಕಾರಿ ಜಮೀನುಗಳ ರಕ್ಷಣೆಗೆ ಆ್ಯಪ್​ ಸಿದ್ಧಪಡಿಸಲಾಗಿದೆ. ಸರ್ಕಾರಿ ಜಮೀನುಗಳನ್ನು ಆ್ಯಪ್​ ಮೂಲಕ ಡಾಟಾ ಬೇಸನ್ನು ಸಿದ್ಧಪಡಿಸಿ ಪ್ರತಿ ಮೂರು ತಿಂಗಳಿಗೊಮ್ಮೆ ಸರ್ಕಾರಿ ಜಾಗಗಳ ಸ್ಥಳಕ್ಕೆ ಗ್ರಾಮ ಲೆಕ್ಕಿಗರು ಭೇಟಿ ನೀಡಿ, ಭೂಮಿ ಒತ್ತುವರಿ ಆಗಿದೆಯೋ, ಇಲ್ಲವೋ ಎಂಬುವುದನ್ನು ಪರಿಶೀಲನೆ ನಡೆಸಿ, ಆ್ಯಪ್​ ಮೂಲಕ ಆ ಸ್ಥಳದಿಂದಲೇ ದೃಡಿಕರಿಸಿ ವರದಿಯನ್ನು ಅಪ್​ಲೊಡ್​ ಮಾಡಬೆಕು. ಒಂದು ವೇಳೆ ಸರ್ಕಾರಿ ಜಮೀನು ಒತ್ತುವರಿ ಆಗಿದ್ದಲ್ಲಿ ಆಪ್​ ಬಳಸಿ ಆನಲೈನ್​ ಮೂಲಕವೇ ತಹಸೀಲ್ದಾರರಿಗೆ ವರದಿ ನೀಡಬೇಕು. ಈ ಪ್ರಕ್ರಿಯೆಯಿಂದ ಸರ್ಕಾರಿ ಭೂ-ಕಬಳಿಕೆ ನಿಯಂತ್ರಣಗೊಳ್ಳಲಿದೆ ಎಂದು ಡಿಸಿ ತಿಳಿಸಿದರು.

ದಾಖಲೆಗಳ ಡಿಜಿಟಲೀಕರಣ
ರೆಕಾರ್ಡ್ಸ್​ ರೂಂನಲ್ಲಿರುವ ದಾಖಲೆಗಳನ್ನು ಸ್ಕಾ$ನ್​ ಮಾಡುವ ಮೂಲಕ ಶಾಶ್ವತವಾಗಿ ಉಳಿಸಲು ಡಿಜಿಟಲೀಕರಣ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದೆ. ರಾಜ್ಯಮಟ್ಟದಲ್ಲಿ ದಾಖಲೆಗಳ ಸೂಕ್ತ ರಕ್ಷಣೆಗೆ ಉತ್ತಮ ತಂತ್ರಾಂಶ ಅಭಿವೃದ್ಧಿಪಡಿಸಿ ರಕ್ಷಣೆ ಮಾಡುತ್ತೇವೆ. ಜನಸಾಮಾನ್ಯರಿಗೆ ಸುಲಭವಾಗಿ ಸಂಬಂಧಿಸಿದ ದಾಖಲೆಗಳು ಸಿಗುವಂತೆ ಮಾಡಲು ಕ್ರಮ ವಹಿಸಲಾಗುತ್ತಿದೆ ಎಂದರು.

ದುರ್ಬಳಕೆಗೆ ತಡೆ
ಬಗರ್​ಹುಕುಂ ಅಡಿ ದುರ್ಬಳಕೆ ತಡೆಗಟ್ಟಲು ಮಂಜೂರಾತಿಗೆ ಡಿಜಿಟಲ್​ ಸಹಿಗೆ ಅವಕಾಶ ಮಾಡಿಕೊಟ್ಟು, ಡಿಜಿಟಲ್​ ಸಾಗುವಳಿ ಚೀಟಿ ನೀಡಲಾಗುತ್ತದೆ. ಈ ಹಿಂದೆ ನೀಡಿದ ಸಾಗುವಳಿ ಚೀಟಿ ನೀಡಿದ ನೈಜತೆಯ ಬಗ್ಗೆ ರಾಜ್ಯದಲ್ಲಿ ಲಕ್ಷಾಂತರ ಪ್ರಕಟಣಗಳು ನ್ಯಾಯಾಲಯದಲ್ಲಿವೆ. ಮುಂದಿನ ದಿನಗಳಲ್ಲಿ ಹೀಗಾಗದಂತೆ ಡಿಜಿಟಲಿಕರಣ ಮಾಡಲಾಗುತ್ತಿದೆ ಎಂದು ಡಿಸಿ ಮಾಹಿತಿ ನೀಡಿದರು.

ಇ-ಆಫೀಸ್​
ಕಂದಾಯ ಇಲಾಖೆ ಕೆಲಸ ಕಾರ್ಯಗಳೆಲ್ಲವೂ ಚುರುಕುಗೊಳಿಸುವ ನಿಟ್ಟಿನಲ್ಲಿ ನಿಧಾನಗತಿ ತಪ್ಪಿಸಲು ಇ&-ಆಫೀಸ್​ ವ್ಯವಸ್ಥೆ ಅಳವಡಿಸಲಾಗಿದೆ. ಇದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಸಂಪೂರ್ಣ ಬಳಸಿಕೊಳ್ಳುವ ಮೂಲಕ ಇ&-ಆಫೀಸ್​ ಮೂಲಕವೇ ಕಡತಗಳ ಚಾಲನೆಯಾಗಬೇಕು. ಇದರಿಂದ ವಿಳಂಭಕ್ಕೆ ವಿದಾಯ ದೊರೆಯುತ್ತದೆ ಎಂದು ಡಿಸಿ ತಿಳಿಸಿದರು.