ಬೆಂಗಳೂರು ಗ್ರಾಮಾಂತರ: ಸರ್ಕಾರದ ಆದೇಶದಂತೆ ರಾಜ್ಯಾದ್ಯಂತ ಶನಿವಾರ ರಾತ್ರಿ 8 ರಿಂದ ಸೋಮವಾರ ಬೆಳಗ್ಗೆ 5ರವರೆಗೆ ಲಾಕ್‌ಡೌನ್ ಆದೇಶದ ಹಿನ್ನೆಲೆಯಲಿ ಜಿಲ್ಲೆಯಲ್ಲೂ ಲಾಕ್‌ಡೌನ್ ಆದೇಶ ಕಟ್ಟುನಿಟ್ಟಿನ ಪಾಲನೆಗೆ ಜಿಲ್ಲಾಡಳಿತ ಮುಂದಾಗಿದೆ.
ಜಿಲ್ಲೆಯಲ್ಲಿ ಕರೊನಾ ಸೋಂಕಿತರ ಸಂಖ್ಯೆ ದ್ವಿಶತಕ ದಾಟಿರುವುದರಿಂದ ಎಚ್ಚೆತ್ತಿರುವ ಜಿಲ್ಲಾಡಳಿತ ಎ್ಲ ಬಗೆಯ ಮುಂಜಾಗ್ರತೆ ಕೈಗೊಂಡಿದೆ.
ಸೋಮವಾರ ಬೆಳಗ್ಗೆವರೆಗೆ ಜಿಲ್ಲೆಯಲ್ಲಿ 144 ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಸರ್ಕಾರದ ಸೂಚಿಸಿದ ಮಾರ್ಗಸೂಚಿ ಉ್ಲಂಸಿದರೆ ಅಂಥವರ ವಿರುದ್ಧ ಎ್ಐಆರ್ ದಾಖಲಿಸುವ ಜತೆಗೆ ಕಠಿಣ ಕ್ರಮಕ್ಕೆ ಜಿಲ್ಲಾಡಳಿತ ಮುಂದಾಗಿದೆ. ಅನಗತ್ಯವಾಗಿ ಓಡಾಡುವವರ ಮೇಲೆ ಕ್ರಮ ಕಗೊಳ್ಳಲು ಜಿಲ್ಲಾ ಪೊಲೀಸ್ ಇಲಾಖೆ ಸನ್ನದ್ಧವಾಗಿದೆ. ಆಯ್ದ ಸ್ಥಳಗಳಲ್ಲಿ ಬ್ಯಾರಿಕೇಡ್ ಅಳವಡಿಸಲಾಗಿದೆ. ಆಟೋ ಮೂಲಕ ಸಾರ್ವಜನಿರಲ್ಲಿ ನಿಯಮದ ಬಗ್ಗೆ ಎಚ್ಚರಿಕೆ ಮೂಡಿಸಲಾಗಿದೆ.
ಕಂಟೇನ್ಮೆಂಟ್ ಜೋನ್‌ನಲ್ಲಿ ಎಚ್ಚರಿಕೆ: ಜಿಲ್ಲೆಯಲ್ಲಿ ಕಂಟೇನ್ಮೆಂಟ್ ಜೋನ್ ಸಂಖ್ಯೆಯೂ ಹೆಚ್ಚಿದೆ. ಇಂಥ ಪ್ರದೇಶಗಳ ಮೇಲೆ ಕಣ್ಣಿಟ್ಟಿರುವ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮ ಕಗೊಂಡಿದೆ. ಪ್ರಮುಖ ರಸ್ತೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ.
ಆಸ್ಪತ್ರೆ, ಮೆಡಿಕಲ್‌ಶಾಪ್, ದಿನಸಿ ಅಂಗಡಿ, ತರಕಾರಿ ಸೇರಿ ಅಗತ್ಯ ಸೇವೆಗಳಿಗೆ ತೊಂದರೆ ಎದುರಾಗದಂತೆ ಕ್ರಮಕೈಗೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್ ಕೆ.ನಾಯಕ್ ತಿಳಿಸಿದ್ದಾರೆ.
ಕೆಎಸ್‌ಆರ್‌ಟಿಸಿ, ಕ್ಯಾಬ್, ಆಟೋ ಸೇವೆ ಇರುವುದ್ಲಿ. ಮದ್ಯಮಾರಾಟ ಸೇರಿ ಇತರ ವಾಣಿಜ್ಯ ವ್ಯಾಪಾರ ವ್ಯವಹಾರಕ್ಕೆ ನಿರ್ಂಧ ಹೇರಲಾಗಿದೆ.
ಮದ್ಯ ಖರೀದಿ ಜೋರು: ವಾರಾಂತ್ಯದ ಲಾಕ್‌ಡೌನ್ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಶನಿವಾರ ಸಂಜೆ ವೇಳೆಗೆ ಮದ್ಯದಂಗಡಿಗಳ ಮುಂದೆ ಗ್ರಾಹಕರ ಸರದಿ ಕಂಡುಬಂತು. ವಾರಾಂತ್ಯವಾದ ಹಿನ್ನೆಲೆಯಲ್ಲಿ ಮದ್ಯಪ್ರಿಯರು ಮದ್ಯಕ್ಕೆ ಮುಗಿಬಿದ್ದ ದೃಶ್ಯ ಕಂಡುಬಂತು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಾಗಿರುವುದರಿಂದ ಮುಖ್ಯ ರಸ್ತೆಗಳಲ್ಲಿ ಕಿಮೀಗಟ್ಟಲೆ ಗ್ರಾಹಕರು ಸಾಲುಗಟ್ಟಿದ್ದರು.
ಜಿಲ್ಲಾ ಪೊಲೀಸ್ ಸಿದ್ಧತೆ: ಕರ್ತವ್ಯನಿರತ ಪೊಲೀಸರಿಗೂ ಕರೊನಾ ವಕ್ಕರಿಸುತ್ತಿರುವುದರಿಂದ ಸಿಬ್ಬಂದಿ ಮುಂಜಾಗ್ರತಾ ಕ್ರಮವಹಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿಬ್ಬಂದಿಗೆ ಸೂಚಿಸಿದ್ದಾರೆ. ಪ್ರತಿದಿನ ಕಾನೂನು ರಕ್ಷಣೆ ಕಾರ್ಯದೊಂದಿಗೆ ವಾರಾಂತ್ಯದ ಲಾಕ್‌ಡೌನ್ ಸಂದರ್ಭವನ್ನು ಸಮರ್ಥವಾಗಿ ನಿಭಾಯಿಸುವಂತೆ ಎಸ್‌ಪಿ ರವಿ ಡಿ.ಚನ್ನಣ್ಣನವರ್ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಕರೊನಾ ಸೋಂಕು ನಿಯಂತ್ರಣಕ್ಕೆ ಅಗತ್ಯ ಕ್ರಮ ಕಗೊಳ್ಳಲಾಗಿದೆ. ವಾರಾಂತ್ಯದ ಲಾಕ್‌ಡೌನ್ ಉ್ಲಂನೆ ಕಂಡುಬಂದರೆ ಅಂಥವರ ವಿರುದ್ಧ ಎ್ಐಆರ್ ದಾಖಲಿಸಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಡಾ.ಜಗದೀಶ್ ಕೆ.ನಾಯಕ್, ಅಪರ ಜಿಲ್ಲಾಧಿಕಾರಿ