ಜಿಲ್ಲೆ

ಸಮುದಾಯ ಸಹಭಾಗಿತ್ವದಲ್ಲಿ ಕ್ರಿಯಾಯೋಜನೆ ತಯಾರಿಸಿ; ತಾಪಂ ಇಒ ಶಿವಪ್ಪ ಸುಬೇದಾರ್ ನಿರ್ದೇಶನ

ಕುಷ್ಟಗಿ: ಸ್ವಚ್ಛ ಭಾರತ ಅಭಿಯಾನದ ಯಶಸ್ವಿಗೆ ಸಮುದಾಯದ ಸಹಭಾಗಿತ್ವದಲ್ಲಿ ಕ್ರಿಯಾಯೋಜನೆ ತಯಾರಿಸಿ ಅನುಷ್ಠಾನಗೊಳಿಸಬೇಕಿದೆ ಎಂದು ತಾಪಂ ಇಒ ಶಿವಪ್ಪ ಸುಬೇದಾರ್ ಹೇಳಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ಕ್ರಿಯಾ ಯೋಜನೆ ತಯಾರಿಸುವ ಸಂಬಂಧ ಗ್ರಾಪಂ ಅಧ್ಯಕ್ಷರು, ಪಿಡಿಒ, ಅಂಗನವಾಡಿ-ಆಶಾ ಕಾರ್ಯಕರ್ತೆಯರು ಹಾಗೂ ಸ್ವಸಹಾಯ ಸಂಘದ ಸದಸ್ಯರಿಗೆ ಏರ್ಪಡಿಸಿದ್ದ ಕಾರ್ಯಾಗಾರ ಉದ್ಘಾಟಿಸಿ ಗುರುವಾರ ಮಾತನಾಡಿದರು.

ಗ್ರಾಮದಲ್ಲಿ ಅಗತ್ಯವಿರುವ ಚರಂಡಿ, ಸಿಸಿ ರಸ್ತೆ, ಕಸ ವಿಲೇವಾರಿ ಘಟಕಗಳನ್ನು ಗಮನದಲ್ಲಿಟ್ಟುಕೊಂಡು ಗ್ರಾಮಸ್ಥರಿಂದಲೇ ಸಲಹೆ ಪಡೆದು ಕ್ರಿಯಾಯೋಜನೆ ಸಿದ್ಧಪಡಿಸಬೇಕು. ಗ್ರಾಪಂ ಮಟ್ಟದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕೈಜೋಡಿಸಬೇಕಿದೆ ಎಂದರು. ಪಂಚಾಯತ್ ರಾಜ್ ವಿಭಾಗದ ಸಹಾಯಕ ನಿರ್ದೇಶಕ ಹನುಮಂತಗೌಡ ಪೊಲೀಸ್ ಪಾಟೀಲ್, ನರೇಗಾ ಸಹಾಯಕ ನಿರ್ದೇಶಕ ವಿಶ್ವನಾಥ ರಾಠೋಡ್ ಮಾತನಾಡಿದರು. ಜಿಪಂ ಎಸ್‌ಬಿಎಂ ಸಮಾಲೋಚಕ ರಾಮಣ್ಣ ಬಂಡಿಹಾಳ ಇತರರಿದ್ದರು.