ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಚಾಮರಾಜನಗರ ರಸ್ತೆ ಅಭಿವೃದ್ದಿ ಕಾಮಗಾರಿಗೆ ಗಣೇಶ್ ಪ್ರಸಾದ್ ಭೂಮಿಪೂಜೆ ನೆರವೇರಿಸಿದರು. ಪಿ.ಮಹದೇವಪ್ಪ, ಮೃತ್ಯುಂಜಯಪ್ಪ, ಬಸವರಾಜು, ನಾರಾಯಣನಾಯ್ಕ, ವೆಂಕಟೇಶ, ಚಂದ್ರಶೇಖರ, ಎಚ್.ಎಸ್.ನಂಜಪ್ಪ, ಎಚ್.ಎಸ್. ನಂಜುಂಡಪ್ರಸಾದ್ ಇದ್ದರು. 
ಜಿಲ್ಲೆ

ಹದಗೆಟ್ಟ ರಸ್ತೆಗಳ ದುರಸ್ತಿಗೆ ಕ್ರಮ

ನಾಗೇಶ ಎಸ್

ಗುಂಡ್ಲುಪೇಟೆ: ಲೋಕೋಪಯೋಗಿ ಇಲಾಖೆಯ ಅನುದಾನದಲ್ಲಿ ಹದಗೆಟ್ಟಿರುವ ರಸ್ತೆಗಳನ್ನು ದುರಸ್ತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಹೇಳಿದರು.

ತಾಲೂಕಿನ ತೆರಕಣಾಂಬಿ ಗ್ರಾಮದಲ್ಲಿ ಸೋಮವಾರ ಲೋಕೋಪಯೋಗಿ ಇಲಾಖೆಯ ಅನುದಾನದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಲೋಕೋಪಯೋಗಿ ಇಲಾಖೆಯ ಅನುದಾನದ 3 ಕೋಟಿ ರೂ. ವೆಚ್ಚದಲ್ಲಿ ಗುಂಡ್ಲುಪೇಟೆ-ಯಳಂದೂರು ರಾಜ್ಯ ಹೆದ್ದಾರಿಯಲ್ಲಿ ದುರಸ್ತಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಸದ್ಯ ತೆರಕಣಾಂಬಿ ಚಾಮರಾಜನಗರ ರಸ್ತೆಯ ಹದಗೆಟ್ಟ ಸ್ಥಳಗಳಲ್ಲಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಅಲ್ಲದೆ ಮಳೆ ನೀರು ರಸ್ತೆಗೆ ಬಾರದಂತೆ ಮಾಡಲು ಎರಡೂ ಬದಿಗಳಲ್ಲಿ ಚರಂಡಿ ನಿರ್ಮಾಣ ಮಾಡಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಎಪಿಎಂಸಿ ನಿರ್ದೇಶಕ ಪಿ.ಮಹದೇವಪ್ಪ, ಮೃತ್ಯುಂಜಯಪ್ಪ, ಗ್ರಾಮ ಪಂಚಾಯಿತಿ ಸದಸ್ಯ ಬಸವರಾಜು, ನಾರಾಯಣನಾಯ್ಕ, ವಕೀಲರ ಸಂಘದ ಅಧ್ಯಕ್ಷ ವೆಂಕಟೇಶ, ಆಟೋ ಚಾಲಕರ ಸಂಘದ ಅಧ್ಯಕ್ಷ ಚಂದ್ರಶೇಖರ, ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ, ಚಾಮುಲ್ ನಿರ್ದೇಶಕ ಎಚ್.ಎಸ್. ನಂಜುಂಡಪ್ರಸಾದ್, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಚ್.ಎನ್.ಬಸವರಾಜು, ಮುಖಂಡರಾದ ಕುಮಾರ್, ನಿಖಿಲ್, ರವಿ ಇತರರು ಇದ್ದರು.