ಗ್ರಾಪಂ ಸಮಸ್ಯೆ ಶೀಘ್ರ ಪರಿಹಾರಕ್ಕಾಗಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಅವರನ್ನು ಶಾಸಕ ಕಿರಣ್ ಕುಮಾರ್ ಕೊಡ್ಗಿ ಭೇಟಿಯಾಗಿ ಚರ್ಚಿಸಿದರು 
ಜಿಲ್ಲೆ

ಗ್ರಾಪಂ ಸಮಸ್ಯೆ ಪರಿಹಾರಕ್ಕೆ ಕ್ರಮ

ಇಂದಿರಾ ಎನ್ ಕೆ

ಕೋಟ: ಗ್ರಾಪಂಗಳಲ್ಲಿನ ಜಲ್‌ಜೀವನ್ ಮಿಷನ್ ಕುಡಿಯುವ ನೀರು ಹಾಗೂ ತ್ಯಾಜ್ಯ ವಿಲೇವಾರಿ, ಮೊಬೈಲ್ ಟವರ್ ಲೈಸೆನ್ಸ್ ನೀಡುವ ಬಗ್ಗೆ ಹಾಗೂ ಸಾರ್ವಜನಿಕರಿಗೆ ಕ್ಲಪ್ತ ಸಮಯದಲ್ಲಿ ಸೇವೆ ಒದಗಿಸುವ ಬಗ್ಗೆ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪ್ರತೀಕ್ ಬಾಯಲ್ ಅವರನ್ನು ಭೇಟಿಯಾಗಿ ಚರ್ಚಿಸಿದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಕಾರ್ಯ ನಿರ್ವಹಣಾಧಿಕಾರಿ, ಇಂಜಿನಿಯರ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಕುಂದಾಪುರ ತಾಪಂ ಸಭಾ ಭವನದಲ್ಲಿ ಶೀಘ್ರ ಸಭೆ ನಡೆಸಿ ಸಮಸ್ಯೆ ಪರಿಹರಿಸುವ ಬಗ್ಗೆ ಮುಖ್ಯ ಕಾರ್ಯನಿರ್ವಾಣಾಧಿಕಾರಿ ತಿಳಿಸಿದರು.