ಮೈಸೂರು: ನಟ ದರ್ಶನ್ ಅವರನ್ನು ವಿವಾಹಕ್ಕೆ ಆಹ್ವಾನಿಸಲು ಪ್ರಯತ್ನಿಸುತ್ತಿದ್ದೇನೆ. ಆದರೆ, ಅವರು ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ನಟ ಡಾಲಿ ಧನಂಜಯ ಹೇಳಿದರು.
ನಗರದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದರ್ಶನ್ ಮದುವೆಗೆ ಬಂದರೆ ಸಂತೋಷ. ಈಗಿನ ಪರಿಸ್ಥಿಯಲ್ಲಿ ಅವರನ್ನು ಭೇಟಿ ಮಾಡಲು ಆಗುತ್ತಿಲ್ಲ. ಕನ್ನಡ ಚಿತ್ರರಂಗದ ಎಲ್ಲರನ್ನೂ ಕರೆದಿದ್ದೇನೆ. ದರ್ಶನ್ ಅವರನ್ನೂ ಕರೆಯಲು ಪ್ರಯತ್ನ ಮಾಡುತ್ತಿದ್ದೇನೆ ಎಂದು ಡಾಲಿ ಧನಂಜಯ ಹೇಳಿದರು.