ರಾಯಚೂರು: ಜನಸೇನಾ ಪಕ್ಷದ ಸಂಸ್ಥಾಪಕ ಹಾಗೂ ತೆಲುಗು ಚಿತ್ರನಟ ಪವನಕಲ್ಯಾಣ ಬಿಜೆಪಿ ಪರ ಪ್ರಚಾರಕ್ಕಾಗಿ ಏ.17ರಂದು ನಗರಕ್ಕೆ ಆಗಮಿಸಿ ರೋಡ್ ಶೋ ನಡೆಸಲಿದ್ದಾರೆ.
ನಗರದ ಹೊರವಲಯದ ಯರಮರಸ್ ಹತ್ತಿರ ಇರುವ ಹೆಲಿಪ್ಯಾಡ್‌ಗೆ ಬೆಳಗ್ಗೆ 10.30ಕ್ಕೆ ಆಗಮಿಸಲಿದ್ದು, ಬೆಳಗ್ಗೆ 11ಕ್ಕೆ ಗಂಜ್ ವೃತ್ತದಿಂದ ಪ್ರಮುಖ ರಸ್ತೆಗಳ ಮಾರ್ಗವಾಗಿ ಆರ್‌ಟಿಒ ವೃತ್ತದವರೆಗೆ ರೋಡ್‌ಶೋ ನಡೆಸಲಿದ್ದಾರೆ.
ನಂತರ ಮಧ್ಯಾಹ್ನ 12.15ಕ್ಕೆ ಹೆಲಿಕ್ಯಾಪ್ಟರ್ ಮೂಲಕ ಬಳ್ಳಾರಿಯ ತೋರಣಗಲ್‌ನ ವಿದ್ಯಾನಗರ ಹೆಲಿಪ್ಯಾಡ್‌ಗೆ ತೆರಳಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.