ಸಂಪಾಜೆಯ ಪಯಸ್ವಿನಿ ಯುವಕ ಸಂಘದ ವತಿಯಿಂದ ನಡೆದ ಕೆಸರು ಗದ್ದೆ ಗ್ರಾಮೀಣ ಕ್ರೀಡಾಕೂಟದ ಕಾರ್ಯಕ್ರಮದಲ್ಲಿ ಭಾರತೀಯ ಭೂಸೇನೆಯ ಬಿಪಿನ್ ದೇವಜನ ಅವರನ್ನು ಸನ್ಮಾನಿಸಲಾಯಿತು. 
ಜಿಲ್ಲೆ

ಹಗ್ಗಜಗ್ಗಾಟದಲ್ಲಿ ಆದರ್ಶ್ ಫ್ರೆಂಡ್ಸ್ ಚೆಡವು ಪ್ರಥಮ

ನಾಗೇಶ ಎಸ್

ನಾಪೋಕ್ಲು: ನೆಹರು ಯುವ ಕೇಂದ್ರ, ಯುವಜನ ಸೇವಾ ಹಾಗೂ ಕ್ರೀಡಾ ಸಚಿವಾಲಯ, ಜಿಲ್ಲಾ ಯುವ ಒಕ್ಕೂಟ ಹಾಗೂ ಸಂಪಾಜೆಯ ಪಯಸ್ವಿನಿ ಯುವಕ ಸಂಘದ ವತಿಯಿಂದ ಇತ್ತೀಚೆಗೆ ನಡೆದ ಪ್ರಥಮ ವರ್ಷದ ಕೆಸರು ಗದ್ದೆ ಗ್ರಾಮೀಣ ಕ್ರೀಡಾಕೂಟದ ಪುರುಷರ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಆದರ್ಶ್ ಫ್ರೆಂಡ್ಸ್ ಚೆಡವು ತಂಡ ಪ್ರಶಸ್ತಿ ಗಳಿಸಿದೆ. ಶ್ರೀ ಮಹಾ ವಿಷ್ಣು ಬಳಗ ಸಂಪಾಜೆ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು.

ಸಂಪಾಜೆಯ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಕೀಲಾರು ಗದ್ದೆಯಲ್ಲಿ ನಡೆದ ಕ್ರೀಡಾಕೂಟಕ್ಕೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಸತ್ಯ ನಾರಾಯಣ ಭಟ್ ಚಾಲನೆ ನೀಡಿದರು. 510 ಕೆಜಿ ಯುವಕರ ವಿಭಾಗದ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಶ್ರೀ ವಿಷ್ಣು ಅಡ್ಕ ಪ್ರಥಮ ಸ್ಥಾನ, ಶ್ರೀ ವಿಷ್ಣು ಸಂಪ್ಯಾ ದ್ವಿತೀಯ ಸ್ಥಾನ ಗಳಿಸಿತು. ಅಡೂರು ಫ್ರೆಂಡ್ಸ್ ತಂಡ ತೃತೀಯ ಹಾಗೂ ಶ್ರೀ ಮಹಾ ವಿಷ್ಣು ಬಳಗ ಸಂಪಾಜೆ ನಾಲ್ಕನೇ ಸ್ಥಾನ ಪಡೆಯಿತು. ಮಹಿಳೆಯರ ಹಗ್ಗಜಗ್ಗಾಟದಲ್ಲಿ ಆದರ್ಶ ಫ್ರೆಂಡ್ಸ್ ಚೆಡವು ಪ್ರಥಮ, ಪಯಸ್ವಿನಿ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿತು. ವಾಲಿಬಾಲ್ ಟೂರ್ನಿಯಲ್ಲಿ ಆದರ್ಶ್ ಫ್ರೆಂಡ್ಸ್ ಪ್ರಥಮ, ಪಯಸ್ವಿನಿ ಸಂಪಾಜೆ ದ್ವಿತೀಯ ಸ್ಥಾನ ಪಡೆಯಿತು.

ಪಯಸ್ವಿನಿ ಯುವಕ ಸಂಘದ ಅಧ್ಯಕ್ಷ ತೀರ್ಥ ಪ್ರಸಾದ್ ದುಗ್ಗಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಪಾಜೆ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಲೋಕನಾಯಕ್, ಗ್ರಾಮ ಪಂಚಾಯತಿ ಅಧ್ಯಕ್ಷೆ ರಮಾದೇವಿ ಬಾಲಚಂದ್ರ ಕಳಗಿ, ಜಯಕುಮಾರ್ ಚಿದ್ಕಾರ್, ನವೀನ್ ಕೊಯನಾಡು ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಭಾರತೀಯ ಭೂಸೇನೆಯ ಬಿಪಿನ್ ದೇವಜನ ಅವರನ್ನು ಸನ್ಮಾನಿಸಲಾಯಿತು.