ಜಿಲ್ಲೆ

ಆದರ್ಶ ಶಾಲೆಗೆ ಪ್ರವೇಶ ಪಡೆಯಲು ಅರ್ಜಿ ಆಹ್ವಾನ

ಸಿಂಧನೂರು: ನಗರದ ಪಿಡಬ್ಲ್ಯುಡಿ ಕ್ಯಾಂಪ್‌ನಲ್ಲಿರುವ ಆದರ್ಶ ವಿದ್ಯಾಲಯ ಆಂಗ್ಲ ಮಾಧ್ಯಮ ಮಾದರಿ ಶಾಲೆಗೆ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ವಿದ್ಯಾರ್ಥಿಗಳು ಜು. 1ರವರೆಗೆ ಅರ್ಜಿ ಸಲ್ಲಿಸಬಹುದು ಎಂದು ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಬಸವಲಿಂಗಪ್ಪ ಹಾಗೂ ಆದರ್ಶ ವಿದ್ಯಾಲಯದ ಮುಖ್ಯಶಿಕ್ಷಕ ಭೀಮರಡ್ಡಿ ತಿಳಿಸಿದ್ದಾರೆ.

ಈ ಕುರಿತು ಬುಧವಾರ ಹೇಳಿಕೆ ನೀಡಿ, 2025-26 ನೇ ಸಾಲಿನಲ್ಲಿ ಶಾಲೆಯಲ್ಲಿ ಖಾಲಿ ಇರುವ 7, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳ ಉಳಿಕೆ ಸೀಟುಗಳಿಗೆ ಪ್ರವೇಶ ಪರೀಕ್ಷೆ ನಡೆಸಲು ಅರ್ಜಿ ಆಹ್ವಾನಿಸಿದ್ದು, ಜು.6 ರಂದು ಪ ್ರವೇಶ ಪರೀಕೆ ್ಷ ನಡೆಸಲಾಗುತ್ತದೆ.

ಅರ್ಜಿಗಳು ಆದರ್ಶ ವಿದ್ಯಾಲಯದಲ್ಲಿ ಲಭ್ಯವಿದ್ದು, ಖುದ್ದಾಗಿ ಪಡೆದು ನಿಗದಿತ ದಿನಾಂಕದೊಳಗೆ ಸಲ್ಲಿಸಬೇಕು. ಮೀಸಲಾತಿ ಅನ್ವಯ ಸೀಟುಗಳನ್ನು ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡಲಾಗುವುದು.