ಸವದತ್ತಿ: ತಾಲೂಕಿನಲ್ಲಿ 5ನೇ ತರಗತಿ ಕಲಿಯುತ್ತಿರುವ ವಿದ್ಯಾರ್ಥಿಗಳು ಯಡ್ರಾವಿ ಗ್ರಾಮದಲ್ಲಿನ ಸರ್ಕಾರಿ ಆದರ್ಶ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಗೆ 2025-26ನೇ ಸಾಲಿನ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಥಿಗಳು http://www.schooleducation.karnataka.gov.in/ ಮತ್ತು http://www.vidyavahini.karnataka.gov.in/ಮೂಲಕ ಫೆ.28ರ ವರೆಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಪೂರ್ವದಲ್ಲಿ ಪಾಲಕರು ತಮ್ಮ ಮಕ್ಕಳ ಶಾಲೆಯ ಎಸ್‌ಎಟಿಎಸ್‌ನಲ್ಲಿ ದಾಖಲಾತಿ ಮಾಹಿತಿ ಪರೀಶಿಲಿಸಿ ಸರಿಪಡಿಸಿಕೊಳ್ಳಬೇಕು. ಪ್ರಶ್ನೆಪತ್ರಿಕೆಯು ವಸ್ತುನಿಷ್ಠ ಪ್ರಶ್ನೆಗಳನ್ನು ಹೊಂದಿದ್ದು, ಆಂಗ್ಲ ಮತ್ತು ಕನ್ನಡ ಮಾಧ್ಯಮದಲ್ಲಿ ಇರುತ್ತದೆ. ಪ್ರವೇಶ ಪರೀಕ್ಷೆಯು ಮಾ.23ರಂದು ನಡೆಯುತ್ತದೆ. ಹೆಚ್ಚಿನ ಮಾಹಿತಿಗಾಗಿ ಮೊ. 9980625701, 9449624312ಗೆ ಸಂಪರ್ಕಿಸಬಹುದೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಮದುರ್ಗ ವರದಿ: ತಾಲೂಕಿನ ಕಟಕೋಳ ಆದರ್ಶ ವಿದ್ಯಾಲಯದ 2025-26 ನೇ ಸಾಲಿನ 6ನೇ ತರಗತಿಯ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ತಾಲೂಕು ವ್ಯಾಪ್ತಿಯಲ್ಲಿ ಪ್ರಸಕ್ತ ಸಾಲಿನಲ್ಲಿ ಐದನೇ ತರಗತಿಯಲ್ಲಿ ಕಲಿಯುತ್ತಿರಬೇಕು. http://www.schooleducation.karnataka.gov.in/ ಮತ್ತು http://www.vidyavahini.karnataka.gov.in/ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬಹುದು. ಫೆ.28 ರ ಸಂಜೆ 5 ಗಂಟೆ ಒಳಗೆ ಅರ್ಜಿ ಸಲ್ಲಿಸಬೇಕು. 23 ರಂದು ರಂದು ಬೆಳಗ್ಗೆ 10.30 ರಿಂದ 1.00 ಗಂಟೆ ವರೆಗೆ ಪ್ರವೇಶ ಪರೀಕ್ಷೆ ನಿಗದಿಪಡಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ವೈ.ವಿ. ಮಳಲಿ ಕಟಕೋಳ ಪ್ರಾಂಶುಪಾಲರು ಸರ್ಕಾರಿ ಆದರ್ಶ ವಿದ್ಯಾಲಯ ಮೊ.9880515528, 7204643686 ಸಂಪರ್ಕಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಆರ್. ಟಿ. ಬಳಿಗಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.