ರಾಯಚೂರು ಜಿ¯್ಲÁಡಳಿತದಿಂದ ಮೇ.೦೨ರಂದು ಶ್ರೀ ಶಂಕರಾಚಾರ್ಯ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಗುತ್ತಿದ್ದು, ಆಚರಣೆಗೆ ಸೂಕ್ತ ಕ್ರಮಕೈಗೊಳ್ಳಬೇಕೆಂದು ಅಪರ ಜಿ¯್ಲÁಽಕಾರಿ ಶಿವಾನಂದ ಸಂಬAಽಸಿದ ಅಽಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಽಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಶಂಕರಾಚಾರ್ಯ ಜಯಂತಿ ಆಚರಣೆ ಸಂಬAಧ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಂದು ಶಂಕರಾಚಾರ್ಯ ಜಯಂತಿಯನ್ನು ಬೆಳಗ್ಗೆ ೦೯ಗಂಟೆಗೆ ನಗರದ ಡಾ.ಬಿ.ಆರï.ಅಂಬೇಡ್ಕರ್ ವೃತ್ತದಿಂದ ರಂಗಮAದಿರದವರೆಗೆ ಮೆರವಣಿ ಕಾರ್ಯಕ್ರಮವನ್ನು ಏರ್ಪಡಿಸಲಾಗುವುದು. ಬೆಳಗ್ಗೆ ೧೦ ಗಂಟೆಗೆ ನಗರದ ರಂಗಮAದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಜಯಂತಿಗಳ ಆಚರಣೆ ಕೇವಲ ಒಂದು ಸಮುದಾಯಕ್ಕೆ ಸೀಮಿತವಲ್ಲ. ಎ¯್ಲÁ ಸಮುದಾಯದವರು ಸೇರಿ ಜಯಂತಿಗಳನ್ನು ಆಚರಿಸಬೇಕು ಎಂದರು.
ಮೆರವಣಿಗೆ ಪ್ರಾರಂಭವಾಗುವ ಸ್ಥಳದಲ್ಲಿ ಶಾಮಿಯಾನ ಸ್ವಚ್ಛತೆ ಹಾಗೂ ಚೇರ್‌ಗಳ ವ್ಯವಸ್ಥೆ ಹಾಗೂ ಜಯಂತಿ ನಡೆಯುವ ಸ್ಥಳದ ಸ್ವಚ್ಛತೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ, ತಳಿರು ತೋರಣ ಹಾಗೂ ಊಟದ ಜÁಗಕ್ಕೆ ಶಾಮಿಯಾನ ವ್ಯವಸ್ಥೆಯನ್ನು ರಾಯಚೂರು ಮಹಾನಗರ ಪಾಲಿಕೆಯಿಂದ ಮಾಡಬೇಕು ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ದತ್ತಪ್ಪ ಸಾಗೂರು ಮಾತನಾಡಿ, ಜಯಂತಿಗಳ ಆಚರಣೆಗೆ ಶಿಷ್ಟಾಚಾರದಂತೆ ಆಮಂತ್ರಣ ಪತ್ರಿಕೆ ಮುದ್ರಿಸಿ ಜನಪ್ರತಿನಿಽಗಳಿಗೆ ಮುಖಂಡರಿಗೆ ಆಹ್ವಾನ ನೀಡಲಾಗುವುದು. ಮೆರವಣಿಗೆಗೆ ಕಲಾ ತಂಡಗಳನ್ನು ನೀಡಲಾಗುವುದು. ಅಲ್ಲದೆ ತಮ್ಮ ತಮ್ಮ ಜಯಂತಿಗಳ ಆಚರಣೆಯ ಸಾನಿಧ್ಯಕ್ಕೆ ತಮ್ಮ ಸಮುದಾಯದ ಸ್ವಾಮೀಜಿಗಳ ಹೆಸರನ್ನು ಆಯ್ಕೆ ಮಾಡಿ ಒಂದೆರಡು ದಿನಗಳಲ್ಲಿ ನೀಡಲಾಗುವುದು.
ಜಯಂತಿಯಲ್ಲಿ ವಿಶೇಷ ಉಪನ್ಯಾಸ ನೀಡಲು ಸಂಪನ್ಮೂಲ ವ್ಯಕ್ತಿಗಳನ್ನು ಆಯ್ಕೆ ಮಾಡಿ ಹೆಸರನ್ನು ನೀಡಲಾಗುವುದು ಎಂದು ಸಮುದಾಯದ ಮುಖಂಡರು ಸಭೆಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಅಽಕಾರಿಗಳು ಹಾಗೂ ಸಮುದಾಯದ ಮುಖಂಡರು ಇದ್ದರು.