ಜಿಲ್ಲೆ

ಹೆಚ್ಚುವರಿ ನೋಂದಣಿ ಮತ್ತು ಖರೀದಿ ಕೇಂದ್ರ ಆರಂಭ

ಎಸ್.ಎರ್ರಿಸ್ವಾಮಿ

ಬಳ್ಳಾರಿ : ಜಿಲ್ಲೆಯಲ್ಲಿ ಪ್ರಸ್ತಕ ಸಾಲಿನ ಹಿಂಗಾರಿನಲ್ಲಿ ಬೆಳೆದ ಜೋಳವನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ಖರೀದಿಸಲು ಈಗಾಗಲೇ ತೀರ್ಮಾನಿಸಲಾಗಿದ್ದು, ಪ್ರಸ್ತುತ ಇರುವ 10 ಖರೀದಿ ಕೇಂದ್ರಗಳ ಜತೆಗೆ 02 ಹೆಚ್ಚುವರಿ ನೋಂದಣಿ ಮತ್ತು ಖರೀದಿ ಕೇಂದ್ರ ತೆರೆಯಲಾಗಿದೆ.

ಸಿರುಗುಪ್ಪ ತಾಲೂಕಿನ ಮುದ್ದಟನೂರು ಮತ್ತು ಅರಳಿಗನೂರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ತೆರೆಯಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕಿ ಸಕೀನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

-----------