ಗೋಕಾಕ: ಬೇಸಿಗೆಯಲ್ಲಿ ಗ್ರಾಮೀಣ ಭಾಗದಲ್ಲಿ ಜನ&ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಮುಂಜಾಗ್ರತ ಕ್ರಮ ಕೈಗೊಳ್ಳಬೇಕೆಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚಿಸಿದರು.
ಇಲ್ಲಿಯ ಎನ್ಎಸ್ಎ್ ಕಚೇರಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಮೂಡಲಗಿ ಮತ್ತು ಗೋಕಾಕ ತಾಲೂಕುಮಟ್ಟದ ಅಧಿಕಾರಿಗಳ ಸಭೆ ಅಧ್ಯತೆ ವಹಿಸಿ ಮಾತನಾಡಿ, ಅಗತ್ಯವಿದ್ದಲ್ಲಿ ಟ್ಯಾಂಕರ್ ಮೂಲಕ ನೀರು ಸರಬುರಾಜು ಮಾಡಲು ಕ್ರಮ ಕೈಗೊಳ್ಳಬೇಕು. ಕೂಡಲೇ ಜೆಜೆಎಂ ಯೋಜನೆ ಕಾಮಗಾರಿ ಪೂರ್ಣಗೊಳಿಸಬೇಕು. ಲೋಕೋಪಯೋಗಿ ಇಲಾಖೆ ತುರ್ತಾಗಿ ಗುಣಮಟ್ಟದ ಕಾಮಗಾರಿ ಕೈಗೊಳ್ಳಬೇಕು. ಅಧಿಕಾರಿಗಳು ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವ ಜತೆಗೆ ಡಿಸೆಂಬರ್ ವೇಳೆಗೆ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಅಮೃತ 2.0 ಯೋಜನೆಯಡಿ ಅರಭಾವಿ, ಕಲ್ಲೋಳಿ, ನಾಗನೂರ, ಮೂಡಲಗಿ ಪಟ್ಟಣಗಳಿಗೆ 140.69 ಕೋಟಿ ರೂ.ಅನುದಾನ ಬಿಡುಗಡೆಯಾಗಿದ್ದು, ಕಾಮಗಾರಿಗೆ ಚಾಲನೆ ನೀಡಲಾಗಿದೆ. ಸುಮಾರು 1,350 ಮನೆ ಮಂಜೂರಾಗಿದ್ದು, ಅರ್ಹ ಲಾನುಭವಿ ಆಯ್ಕೆ ಮಾಡಬೇಕು. ಮೆಳವಂಕಿ ಗ್ರಾಮದಲ್ಲಿ ಈಚೆಗೆ ಆಹಾರ ವಿಷಪೂರಿತವಾಗಿ ಜನ ಅಸ್ತವ್ಯಸ್ತಗೊಂಡಿದ್ದರು. ಯಾವೊಬ್ಬ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿಲ್ಲ ಎಂದು ಸಿಡಿಮಿಡಿಗೊಂಡರು.
ಕೌಜಲಗಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಬಿಲಕುಂದಿಗೆ ಸ್ಥಳಾಂತರ ಮಾಡುವಂತೆಯೂ ಸೂಚಿಸಿದರು. 20 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಕೂಡಲೇ ಆರಂಭಿಸಬೇಕು. ಲೆ$್ಮಶ್ವರ, ಹೊನಕುಪ್ಪಿ ರೈತರಿಗೆ ಹಿಡಕಲ್ ಜಲಾಶಯದಿಂದ ನೀರು ಹೋಗುತ್ತಿಲ್ಲ. ಈ ಬಗ್ಗೆ ಅಧಿಕಾರಿಗಳು ಅಗತ್ಯ ಯೋಜನೆ ರೂಪಿಸಬೇಕು ಶಾಸಕ ಬಾಲಚಂದ್ರ ತಿಳಿಸಿದರು.
ಸಾರಿಗೆ ಸೌಲಭ್ಯ ಕಲ್ಪಿಸಿ: ಮಾ.1 ರಿಂದ ಪಿಯುಸಿ ಪರೀೆ ಆರಂಭವಾಗಿದ್ದು, ವಿದ್ಯಾರ್ಥಿಗಳಿಗೆ ವ್ಯವಸ್ಥಿತವಾಗಿ ವಿದ್ಯುತ್ ಹಾಗೂ ಬಸ್ ಸೌಲಭ್ಯ ಕಲ್ಪಿಸಬೇಕೆಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
ತಹಸೀಲ್ದಾರ್ರಾದ ಡಾ.ಮೋಹನ ಭಸ್ಮೆ, ಶಿವಾನಂದ ಬಬಲಿ, ತಾಪಂ ಇಒಗಳಾದ ಪರಶುರಾಮ ಗಸ್ತಿ, ಎ್.ಜಿ.ಚಿನ್ನನ್ನವರ, ಸಿಪಿಐಗಳಾದ ಶ್ರೀಶೈಲ ಬ್ಯಾಕೂಡ, ಎಚ್.ಡಿ.ಮುಲ್ಲಾ ಹಾಗೂ ಅಧಿಕಾರಿಗಳು ಇದ್ದರು.