ಜಿಲ್ಲೆ

ಮೇ 2 ರಂದು ಆದಿ ಶಂಕರಾಚಾರ್ಯರ ಜಯಂತಿ

ಗಿರೀಶ ಸಗರ

ವಿಜಯಪುರ: ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸತಿ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಮೇ 2 ರಂದು ನಗರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ಆದಿ ಶಂಕರಾಚಾರ್ಯರ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಅಂದು ಬೆಳಗ್ಗೆ 9ಕ್ಕೆ ಮಹಾಲಕ್ಷಿ$್ಮ ದೇವಸ್ಥಾನದಿಂದ ಕಂದಗಲ್ಲ ಹನುಮಂತರಾಯ ರಂಗಮಂದಿರದವರೆಗೆ ಮಹನೀಯರ ಭಾವಚಿತ್ರ ಮೆರವಣಿಗೆ ನಡೆಯಲಿದೆ. ಬಳಿಕ ಜಯಂತಿ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದೆ.

ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಧ್ಯಕ್ಷತೆ ವಹಿಸುವರು. ಸಕ್ಕರೆ ಸಚಿವ ಶಿವಾನಂದ ಪಾಟೀಲ, ವಿ.ಪ. ವಿರೋಧ ಪಕ್ಷದ ಮುಖ್ಯ ಸಚೇತಕ ರವಿಕುಮಾರ್​ ಎನ್​., ನವದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ, ಕೆಎಸ್​ಡಿ ನಿಗಮದ ಅಧ್ಯಕ್ಷ, ಶಾಸಕ ಅಪ್ಪಾಜಿ ನಾಡಗೌಡ, ಸಂಸದ ರಮೇಶ ಜಿಗಜಿಣಗಿ, ರಾಜ್ಯಸಭಾ ಸದಸ್ಯೆ ಡಾ. ಸುಧಾ ಮೂರ್ತಿ, ಶಾಸಕರಾದ ಯಶವಂತರಾಯಗೌಡ ಪಾಟೀಲ, ವಿಠ್ಠಲ ಕಟಕಧೋಂಡ, ರಾಜುಗೌಡ ಪಾಟೀಲ, ಅಶೋಕ ಮನಗೂಳಿ, ವಿ.ಪ. ಸದಸ್ಯರಾದ ಹಣಮಂತ ನಿರಾಣಿ, ಸುನೀಲಗೌಡ ಪಾಟೀಲ, ಪಿ.ಎಚ್​. ಪೂಜಾರ, ಕೇಶವ ಪ್ರಸಾದ ಎಸ್​., ರಾಜ್ಯ ಕೌಶಲಾಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯ್ಕ, ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ವಿಡಿಎ ಅಧ್ಯಕ್ಷ ಕನಾನ್​ ಮುಶ್ರೀಫ್​ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಜಿಲ್ಲಾ ಸಮಿತಿ ಅಧ್ಯಕ್ಷ ಇಲಿಯಾಸ್​ ಬೋರಾಮಣಿ, ಜಿಲ್ಲಾಧಿಕಾರಿ ಟಿ. ಭೂಬಾಲನ್​, ಜಿ.ಪಂ. ಸಿಇಒ ರಿಷಿ ಆನಂದ ಹಾಗೂ ಎಸ್​ಪಿ ಲಕ್ಷ$್ಮಣ ನಿಂಬರಗಿ ಉಪಸ್ಥಿತರಿರುವರು.

ರಾಜಶೇಖರ ಎನ್​. (ರಾಜಸರಸ್ವತಿ) ವಿಶೇಷ ಉಪನ್ಯಾಸ ಹಾಗೂ ವೀಣಾ ಥಿಟೆ ಸುಗಮ ಸಂಗೀತ ನಡೆಸಿಕೊಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.