ಮಂಡ್ಯ: ನಾಗಮಂಗಲ ತಾಲೂಕು ಬಿ.ಜಿ ನಗರದ ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಸೀಳು ತುಟಿ, ಸೀಳು ಅಂಗುಳ ಮತ್ತು ಸುಟ್ಟಗಾಯಗಳಿಂದ ಉಂಟಾದ ವಿರೂಪಗಳ ಉಚಿತ ಶಸ್ತ್ರ ಚಿಕಿತ್ಸಾ ಶಿಬಿರವನ್ನು ಡಿ.1ರಂದು 13ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಆಸ್ಪತ್ರೆಯ ಮುಖ್ಯಸ್ಥ ಡಾ.ಕೆ.ಎಂ.ಶಿವಕುಮಾರ್ ತಿಳಿಸಿದರು.
ಶಿಬಿರವನ್ನು ಆದಿಚುಂಚನಗಿರಿ ಆಸ್ಪತ್ರೆ, ಅಮೆರಿಕಾದ ರೂಟಾಪ್ಲಾಸ್ಟ್ ಇಂಟರ್ ನ್ಯಾಷನಲ್ ಸಂಸ್ಥೆ, ರೋಟರಿ ಸಂಸ್ಥೆಯ ಸಹಯೋಗದೊಂದಿಗೆ ನಡೆಸಲಾಗುತ್ತಿದೆ. 2ರಿಂದ 18 ವರ್ಷದ ಮಕ್ಕಳು ಶಸ್ತ್ರ ಚಿಕಿತ್ಸೆ ಮಾಡಿಕೊಳ್ಳಬಹುದಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಅಮೆರಿಕಾದ ರೂಟಾಪ್ಲಾಸ್ಟ್ ಇಂಟರ್ ನ್ಯಾಷನಲ್ ಸಂಸ್ಥೆಯ ನುರಿತ 30 ತಜ್ಞ ವೈದ್ಯರ ತಂಡದಿಂದ ಶಸ್ತ್ರ ಚಿಕಿತ್ಸೆ ನಡೆಸಲಾಗುತ್ತಿದ್ದು, ಶಿಬಿರದಲ್ಲಿ ಭಾಗವಹಿಸುವ ಉಚಿತ ಶಸ್ತ್ರ ಚಿಕಿತ್ಸೆ, ಔಷಧೋಪಚಾರ, ವಾರ್ಡ್ ಸೌಲಭ್ಯ ನೀಡಲಾಗುವುದು. ಶಿಬಿರಾರ್ಥಿಗಳ ಸಹಾಯಕರಿಗೆ ವಸತಿ ಮತ್ತು ಊಟದ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಈಗಾಗಲೇ ಪೂರ್ವ ನೋಂದಣಿ ಪ್ರಕ್ರಿಯೆ ನಡೆಯುತ್ತಿದ್ದು, ಆಸಕ್ತರು ಮೊ.ಸಂ. 9945558579, 9900758946, 7975012982, 08234-287575 ಅಥವಾ ದೂ.ಸಂ 08234-287011 ಯನ್ನು ಸಂಪರ್ಕಿಸಬಹುದು ಎಂದು ಮಾಹಿತಿ ನೀಡಿದರು.